9 Killed : ಭಾರೀ ಮಳೆಗೆ ಕುಸಿದ ಮನೆ, 4 ಮಕ್ಕಳು ಸೇರಿ 9 ಮಂದಿ ದುರ್ಮರಣ

ಚೆನ್ನೈ : ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ (Heavy Rain) ಮನೆ ಕುಸಿತವಾಗಿದ್ದು (9 Killed ) ಮನೆಯಲ್ಲಿ ವಾಸವಾಗಿದ್ದ 9 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಪೆರ್ನಂಬೆಟ್‌ನಲ್ಲಿ ನಡೆದಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಹಾಗೂ ಓರ್ವ ಪುರುಷರು ಸೇರಿದ್ದಾರೆ. ಮನೆಯವರು ಗಾಢ ನಿದ್ದೆಯಲ್ಲಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಘಟನೆ ನಡೆಯುತ್ತಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಗಾಯಗೊಂಡವರನ್ನು ಹೊರ ತೆಗೆದಿದ್ದಾರೆ. ಮನೆ ಕುಸಿತದಿಂದಾಗಿ ಒಟ್ಟು ಎಂಟು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಪೇರಂಬೆಟ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇನ್ನುಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪೇರಂಂಬೆಟ್ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಶುಕ್ರವಾರ ಮುಂಜಾನೆ ತಮಿಳುನಾಡು ಮತ್ತು ಆಂಧ್ರಪ್ರದೇಶದ ನಡುವೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಸುರಿಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಶುಕ್ರವಾರ ಆಂಧ್ರಪ್ರದೇಶ ತಿರುಪತಿಯಲ್ಲಿ ರಸ್ತೆಗಳು ಜಲಾವೃತಗೊಂಡವು. ಭಗವಾನ್ ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲವು ಅಭೂತಪೂರ್ವ ಪ್ರಮಾಣದ ಬೃಹತ್ ಪ್ರವಾಹದಲ್ಲಿ ಸಿಲುಕಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ನೂರಾರು ಯಾತ್ರಾರ್ಥಿಗಳು ಸಿಕ್ಕಿಬಿದ್ದಿದ್ದು, ದೇವಾಲಯ-ಪಟ್ಟಣ ತಿರುಪತಿ ಮತ್ತು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಹಲವು ಭಾಗಗಳನ್ನು ಜರ್ಜರಿತಗೊಳಿಸಿದೆ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಜಾಗರೂಕರಾಗಿರಬೇಕು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹವಾಮಾನ ಇಲಾಖೆಯು ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಮತ್ತು ಕೆಲವು ಸ್ಥಳಗಳಲ್ಲಿ ಭಾರೀ ಮತ್ತು ಅತಿ ಭಾರೀ ಮಳೆ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣದಲ್ಲಿ 34.32 ಲಕ್ಷ ಮೌಲ್ಯದ ಚಿನ್ನ ವಶ

ಇದನ್ನೂ ಓದಿ : ಆಂಧ್ರಪ್ರದೇಶದಲ್ಲಿ ಭಾರೀ ಮಳೆ : ತಿರುಪತಿ ದೇವಸ್ಥಾನದ ಆವರಣದಲ್ಲಿ ಭಾರೀ ಪ್ರವಾಹ

( 9 Killed Including 4 Children in House Collapse due to Heavy Rain)

Comments are closed.