ಸೋಮವಾರ, ಏಪ್ರಿಲ್ 28, 2025
HomeCrimeRuby Lodge Fire accident : ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿದುರಂತ : 8 ಮಂದಿ...

Ruby Lodge Fire accident : ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿದುರಂತ : 8 ಮಂದಿ ಸಾವು

- Advertisement -

ತೆಲಂಗಾಣ : (Ruby Lodge Fire accident) ಎಲೆಕ್ಟ್ರಿಕ್‌ ಸ್ಕೂಟರ್‌ ಶೋರೂಂನಲ್ಲಿ ನಡೆದ ಅಗ್ನಿ ದುರಂತದಲ್ಲಿ 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ತೆಲಂಗಾಣದ (Telangana) ಸಿಕಂದರಾಬಾದ್‌ನಲ್ಲಿರುವ (Secunderabad ) ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ನಡೆದಿದೆ.

ಅಗ್ನಿ ಅವಘಡದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ರಾತ್ರಿ ರೂಬಿ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಮೇಲಿನ ಮಹಡಿಯಲ್ಲಿರುವ ಲಾಡ್ಜ್‌ಗೆ ದಟ್ಟ ಹೊಗೆ ವ್ಯಾಪಿಸಿದೆ. ಅಪಘಾತದ ವೇಳೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಪಘಾತದ ಸಮಯದಲ್ಲಿ ಲಾಡ್ಜ್‌ನಲ್ಲಿ ಸುಮಾರು 25 ಪ್ರವಾಸಿಗರು ಇದ್ದರು ಎಂದು ಪೊಲೀಸರು ಅಂದಾಜಿಸಿದ್ದಾರೆ. ಗಾಯಾಳುಗಳು ಗಾಂಧಿ, ಯಶೋದಾ ಮತ್ತು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಲೆಕ್ಟ್ರಿಕ್ ಬೈಕ್ ಅನ್ನು ಚಾರ್ಜ್ ಮಾಡುವಾಗ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಇದೇ ವೇಳೆ ಶೋರೂಂನಲ್ಲಿದ್ದ ಬೈಕ್ ಗಳಿಗೆ ಬೆಂಕಿ ತಗುಲಿದ್ದರಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅದೇ ಸಮಯದಲ್ಲಿ, ಮೇಲಿನ ಮಹಡಿಯಲ್ಲಿರುವ ಹೋಟೆಲ್ ಕೋಣೆಗೆ ದಟ್ಟವಾದ ಹೊಗೆ ಪ್ರವೇಶಿಸಿತು ಎಂದು ಅಗ್ನಿಶಾಮಕ ಅಧಿಕಾರಿ ಮಾಧ್ಯಮಗಳಿಗೆ ವಿವರಿಸಿದರು. ಲಾಡ್ಜ್ ಒಳಗೆ ಹೋಗಲು ಮತ್ತು ಹೊರಗೆ ಬರಲು ಒಂದೇ ದಾರಿ ಇದ್ದ ಕಾರಣ ಸಾವು ಸಂಭವಿಸಿದೆ ಎನ್ನಲಾಗಿದೆ. ಲಾಡ್ಜ್‌ನಲ್ಲಿದ್ದವರೆಲ್ಲ ಮೆಟ್ಟಿಲಿನಿಂದ ಕೆಳಗಿಳಿಯಲು ಸಾಧ್ಯವಾಗಲಿಲ್ಲ.. ಕಟ್ಟಡದಲ್ಲಿದ್ದ 9 ಮಂದಿಯನ್ನು ಹೈಡ್ರಾಲಿಕ್ ಕ್ರೇನ್ ಸಹಾಯದಿಂದ ರಕ್ಷಿಸಲಾಗಿದೆ ಎಂದು ಹೇಳಿದರು.

ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನ ಮ್ಯಾನೇಜರ್ ರಂಜಿತ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದು, ಭಾರೀ ಬೆಂಕಿ ಘಟನೆಗೆ ಸಂಬಂಧಿಸಿದಂತೆ ಸೆಕ್ಷನ್ 304 ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಧಿಕಾರಿಗಳು ರೂಬಿಯ ಎಲೆಕ್ಟ್ರಿಕ್ ಸ್ಕೂಟರ್ ಜೊತೆಗೆ ಲಾಡ್ಜ್ ಅನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರ ರಾತ್ರಿ 9.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕೆಲವರು ತಪ್ಪಿಸಿಕೊಳ್ಳಲು ಸಾಧ್ಯವಾಗದ ಕಾರಣ ನಾಲ್ಕನೇ ಮಹಡಿಯಿಂದ ಪೈಪ್‌ಗಳನ್ನು ಕಿತ್ತುಕೊಂಡು ಕೆಳಗೆ ಬಂದು ಪ್ರಾಣ ಉಳಿಸಿಕೊಂಡರು.

ಇದನ್ನೂ ಓದಿ : Karnataka Dasara Holidays 2022 : ಸೆಪ್ಟೆಂಬರ್‌ 26 ರಿಂದ ದಸರಾ ರಜೆ ಘೋಷಣೆ : ಸಚಿವರಿಂದ ಮಹತ್ವದ ಆದೇಶ

ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ಐವತ್ತು ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ : forest department :ಶ್ರೀಗಂಧದ ಮರಗಳೇ ಇವರ ಟಾರ್ಗೆಟ್​: ಅಕ್ರಮದ ಬಗ್ಗೆ ತಿಳಿದಿದ್ದರೂ ಅರಣ್ಯ ಇಲಾಖೆ ಸೈಲೆಂಟ್

Telangana eight members dead Secunderabad ruby lodge fire accident Telugu news

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular