independence day flag hoisting : ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ, ₹25 ಲಕ್ಷ ಪರಿಹಾರ : ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ

ಬೆಂಗಳೂರು : independence day flag hoisting : ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ಪೂರ್ಣಗೊಂಡಿವೆ. 76ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ.ಇಂದು ಬೆಂಗಳೂರಿನ ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಧ್ವಜಾರೋಹಣ ನಡೆಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಈ ರಾಜ್ಯವು ಸುಧಾರಣೆಗೊಂಡಿದೆ ಎಂದು ಹೇಳಿದರು.


ಸ್ವಾತಂತ್ರ್ಯ ಹೋರಾಟದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ಬಲಿದಾನಗಳನ್ನು ನೆನೆದ ಸಿಎಂ ಬಸವರಾಜ ಬೊಮ್ಮಾಯಿ, ಆತ್ಮಸ್ಥೈರ್ಯದಿಂದ ಹೋರಾಡಿದಲ್ಲಿ ಅತ್ಯಂತ ಶಕ್ತಿಶಾಲಿ ಬ್ರಿಟೀಷರನ್ನೂ ಬಗ್ಗು ಬಡಿಯಬಹುದು ಎಂಬುದನ್ನು ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕರು ಸಾಧಿಸಿ ತೋರಿಸಿದ್ದಾರೆ. ದೇಶದ ಮೊದಲ ಪ್ರಧಾನಿ ಜವಹರಲಾಲ್​ರಿಂದ ಹಿಡಿದು ಇಂದಿನ ಪ್ರಧಾನಿ ನರೇಂದ್ರ ಮೋದಿಯವರೆಗೂ ದೇಶಕ್ಕಾಗಿ ಮಾಡಿರುವ ಸೇವೆಗಳನ್ನು ಸಿಎಂ ಬೊಮ್ಮಾಯಿ ಕೊಂಡಾಡಿದ್ದಾರೆ.


ಇದೇ ವೇಳೆ ರಾಜ್ಯ ಸರ್ಕಾರದ ಸಾಧನೆಗಳ ವಿಚಾರವಾಗಿಯೂ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,ನಮ್ಮ ಸರ್ಕಾರ ಅವಧಿಯಲ್ಲಿ ರಾಜ್ಯದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿದ್ದೇವೆ. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಪೌರ ಕಾರ್ಮಿಕರ ವೇತನ ಹಾಗೂ ಗೌರವ ಧನಗಳನ್ನು ಏರಿಕೆ ಮಾಡಿದ್ದೇವೆ. 30 ಲಕ್ಷಕ್ಕೂ ಅಧಿಕ ರೈತರಿಗೆ ಸಾಲ ಸೌಕರ್ಯ ದೊರಕಿದೆ. ಪ್ರತಿಯೊಬ್ಬ ಹಿರಿಯ ನಾಗರಿಕರ ಆರೋಗ್ಯ ತಪಾಸಣೆಗೆ ಅವಕಾಶ ಕಲ್ಪಿಸಲಾಗಿದೆ. ಭಾರೀ ಮಳೆಯಿಂದಾಗಿ ಮನೆಯನ್ನು ಕಳೆದುಕೊಂಡವರಿಗೆ ರಾಜ್ಯ ಸರ್ಕಾರದ 4 ಲಕ್ಷ ರೂಪಾಯಿ ಹಾಗೂ ಕೇಂದ್ರದ 1 ಲಕ್ಷ ರೂಪಾಯಿಗಳನ್ನು ಸೇರಿಸಿ ಪರಿಹಾರ ನೀಡಲಾಗಿದೆ. ಹಿಂದಿನ ಸರ್ಕಾರಗಳು ಜನತೆಗೆ ಪರಿಹಾರ ನೀಡಲು ತುಂಬಾ ಸಮಯವನ್ನು ತೆಗೆದುಕೊಳ್ಳುತ್ತಿದ್ದವು. ಆದರೆ ನಮ್ಮ ಸರ್ಕಾರ ಜನತೆಗೆ ತ್ವರಿತ ಪರಿಹಾರ ನೀಡಿದೆ ಎಂದು ಹೇಳಿದರು.


ಇದೇ ವೇಳೆ ಹುತಾತ್ಮ ಯೋಧರ ಕುಟುಂಬಕ್ಕೆ ಗುಡ್​ ನ್ಯೂಸ್​ ನೀಡಿದ ಸಿಎಂ ಬೊಮ್ಮಾಯಿ, ಜೀವದ ಹಂಗನ್ನು ತೊರೆದು ಚಳಿ ಮಳೆಯನ್ನು ಲೆಕ್ಕಿಸದೇ ದೇಶಕ್ಕಾಗಿ ಗಡಿಯಲ್ಲಿ ಹೋರಾಡಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ಸರ್ಕಾರಿ ಉದ್ಯೋಗವನ್ನು ನೀಡಲಾಗುತ್ತದೆ. ಅಲ್ಲದೇ ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದ ಕಡೆಯಿಂದ 25 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುತ್ತದೆ ಎಂದು ಘೋಷಣೆ ಮಾಡಿದರು.

ಇದನ್ನು ಓದಿ : Ross Taylor reveals Shocking Incident: ನ್ಯೂಜಿಲೆಂಡ್ ಕ್ರಿಕೆಟರ್ ರಾಸ್ ಟೇಲರ್ ಕೆನ್ನೆಗೆ ಬಾರಿಸಿದ್ದ ರಾಜಸ್ಥಾನ್ ರಾಯಲ್ಸ್ ಟೀಮ್ ಓನರ್

ಇದನ್ನೂ ಓದಿ : Eidgah Maidan Chamrajpet :ವಿವಾದಿತ ಈದ್ಗಾ ಮೈದಾನದಲ್ಲಿ ಕೊನೆಗೂ ತ್ರಿವರ್ಣ ಧ್ವಜದ ಹಾರಾಟ : ಖಾಕಿ ಸರ್ಪಗಾವಲು

the state has improved since our government came says basavaraj bommai after independence day flag hoisting

Comments are closed.