ಶಾಲಾ ಮಕ್ಕಳ ಮೇಲೆ ಹರಿದ ಕಾರು : 3 ವಿದ್ಯಾರ್ಥಿಗಳ ಸಾವು, ಮೂವರು ಗಂಭೀರ

ಆಗ್ರಾ : Children Killed Agra : ಬಸ್ಸಿಗೆ ಕಾಯುತ್ತಿದ್ದ ಶಾಲಾ ಮಕ್ಕಳ ಮೇಲೆ ಕಾರು ಹರಿದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಗ್ರಾದ ದೌಕಿ ಪ್ರದೇಶದಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಮಹಾಪತ್ ಗ್ರಾಮದಲ್ಲಿ ಶಾಲಾ ಮಕ್ಕಳು ರಸ್ತೆ ಪಕ್ಕದಲ್ಲಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆಯಲ್ಲಿ ಫತೇಹಾಬಾದ್ ರಸ್ತೆಯ ಬದಿಯಿಂದ ವೇಗವಾಗಿ ಬಂದ ಕಾರು ಮಕ್ಕಳ ಮೇಲೆ ಹರಿದಿದೆ. ಈ ವೇಳೆಯಲ್ಲಿ ಕಾರಿನಡಿ ಸಿಲುಕಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಅಪಘಾತದ ಬೆನ್ನಲ್ಲೇ ಹಲವು ಮಕ್ಕಳು ರಕ್ಷಣೆಗಾಗಿ ಓಡಿ ಬಂದಿದ್ದಾರೆ. ಕಾರು ಚಾಲಕನ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಫತೇಹಾಬಾದ್‌ನ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸೌರಭ್ ಸಿಂಗ್ ಹೇಳಿದ್ದಾರೆ. ಗಾಯಗೊಂಡ ಮೂವರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಪ್ರವಾಸಿಗರ ದೋಣಿ ನೀರುಪಾಲು ಮಕ್ಕಳು ಸೇರಿ 22 ಮಂದಿ ಸಾವು

ತಿರುವನಂತಪುರಂ : ಪ್ರವಾಸಿಗರ ತಾಣದಲ್ಲಿ ಹೆಸರುವಾಸಿಯಾಗಿರುವ ಕೇರಳದಲ್ಲಿ ದುರಂತ ಘಟನೆಯೊಂದು (Kerala tourist boat) ನಡೆದಿದೆ. ಪ್ರವಾಸಿಗರ ದೋಣಿಯೊಂದು ಮುಳುಗಿ ಮಕ್ಕಳು ಸೇರಿದಂತೆ 22 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಈ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.

ಸದ್ಯ ಈ ದುರ್ಘಟನೆ ಕೇರಳದ ಮಲಪ್ಪುರಂನ ತನೂರ್‌ ಪ್ರದೇಶದಲ್ಲಿ ನಡೆದಿದೆ. ಪ್ರವಾಸಿಗರ ದೋಣಿಯಲ್ಲಿ 40 ಪ್ರಯಾಣಿಕರು ಇದ್ದರು. ಘಟನೆಯ ವೇಳೆ ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ದುರ್ಘಟನೆಯಲ್ಲಿ ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯಚಾರಣೆ ನಡೆಯುತ್ತಿದೆ.

ಸಚಿವ ವಿ.ಅಬ್ದುರಹಿಮಾನ್‌ ಮಾಹಿತಿ ನೀಡಿದ್ದು, ಸಾವಿನ ಸಂಖ್ಯೆ ಈಗ 22ಕ್ಕೆ ಏರಿದೆ. 7 ಜನರ ಸ್ಥೀತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಪರಿಹಾರ ನಿಧಿಯಿಂದ 2 ಲಕ್ಷ ರೂ ಘೋಷಿಸಿದ್ದಾರೆ.

ಕೇರಳದ ಮಲಪ್ಪುರಂನಲ್ಲಿ ದೋಣಿ ದುರಂತದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ವನ್ನು ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಾವಿಗೆ ಸಂತಾಪ ಸೂಚಿಸಿ ಹೇಳಿಕೆ ನೀಡಿದ್ದು, ಸಂಘಟಿತ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸಿಎಂ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು, ತಾನೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ : Wrestlers vs WFI : ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ 7 ಮಹಿಳಾ ಕುಸ್ತಿಪಟುಗಳಿಗೆ ಭದ್ರತೆ ನೀಡಿದ ದೆಹಲಿ ಪೊಲೀಸರು

ಇದನ್ನೂ ಓದಿ : IT Raid Bangalore : ಫೈನಾನ್ಶಿಯರ್‌ಗಳ ಮನೆ ಮೇಲೆ ಐಟಿ ದಾಳಿ : 20 ಕೋಟಿ ರೂಪಾಯಿ ಜಪ್ತಿ

Children Killed Agra : Three Children Killed As Car Runs Over 6 Agra

Comments are closed.