ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು 62.480 ಪ್ರಕರಣ ದಾಖಲಾಗಿದ್ದು, 1.584 ಮಂದಿಯನ್ನು ಬಲಿ ಪಡೆದಿದೆ.

ಭಾರತದಲ್ಲಿ ಇಂದು 62,480 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2,97,62,793 ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನ ಜೊತೆ ಜೊತೆಗೆ ಸಾವಿನ ಪ್ರಮಾಣದಲ್ಲಿಯೂ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,587 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,83,490 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 73 ದಿನಗಳ ನಂತರ ಸಕ್ರೀಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಇದೀಗ ದೇಶದಲ್ಲಿ 7.98.656 ಸಕ್ರೀಯ ಕೊರೊನಾ ಪ್ರಕರಣಗಳಿದ್ದು, ಇದುವರೆಗೆ ಒಟ್ಟು 2,85,80,647 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದುವರೆಗೆ ದೇಶದಲ್ಲಿ 26,80,60,399 ಮಂದಿಗೆ ಲಸಿಕೆಯನ್ನು ನೀಡಲಾಗಿದೆ.