ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿ ನಿರಂಜನ ಭಟ್ ಗೆ ಜಾಮೀನು

0

ಉಡುಪಿ : ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಜ್ಯೋತಿಷಿ ನಿರಂಜನ ಭಟ್ ಗೆ ನ್ಯಾಯಾಲಯ ಷರತ್ತು ಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಉಡುಪಿಯ ಹೋಟೆಲ್ ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಭಟ್ ಹಾಗೂ ರಾಜೇಶ್ವರಿ ಪ್ರಿಯಕರನಾಗಿದ್ದ ನಿರಂಜನ್ ಭಟ್ ಸೇರಿ ಹತ್ಯೆ ಮಾಡಿ ಹೋಮ ಕುಂಡದಲ್ಲಿ ಸುಟ್ಟು ಹಾಕಿದ್ದರು. ಈ ಹತ್ಯೆ ಪ್ರಕರಣದಲ್ಲಿ ನಿರಂಜನ್ ಭಟ್ ಮಾಸ್ಟರ್ ಮೈಂಡ್ ಆಗಿದ್ದ. ಅಲ್ಲದೇ ನಿರಂಜನ ಭಟ್ ತಂದೆ ಶ್ರೀನಿವಾಸ ಭಟ್ ಹಾಗೂ ಚಾಲಕ ರಾಘವೇಂದ್ರ ಸಹಕಾರವನ್ನು ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಆದ್ರೆ ನ್ಯಾಯಾಲಯ ಅವರಿಬ್ಬರನ್ನೂ ನಂತರದಲ್ಲಿ ಬಿಡುಗಡೆ ಮಾಡಿತ್ತು.

ಆದರೆ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದಲೂ ನಿರಂಜನ ಭಟ್ ಜೈಲಿನಲ್ಲಿದ್ದ. ಪ್ರಕರಣದ ನಾಲ್ಕನೇ ಆರೋಪಿಯಾಗಿದ್ದ ನಿರಂಜನ ಭಟ್ ತಂದೆ ಶ್ರೀನಿವಾಸ ಭಟ್ ಎರಡು ದಿನಗಳ ಹಿಂದೆಯಷ್ಟೇ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲೀಗ ನ್ಯಾಯಾಲಯ 5 ಲಕ್ಷ ರೂಪಾಯಿಯ ಬಾಂಡ್ ಪಡೆದ 7 ದಿನಗಳ ಕಾಲ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

Leave A Reply

Your email address will not be published.