ಉಡುಪಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಬ್ಯಾಂಕಿನ ವ್ಯವಹಾರದ ಅವಧಿಯಲ್ಲಿ ಬದಲಾವಣೆಯನ್ನು ಮಾಡಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ನಿತ್ಯವೂ ಅಗತ್ಯ ವಸ್ತುಗಳ ಖರೀದಿಸಲು ಬೆಳಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ. ಆದರೆ ಬ್ಯಾಂಕುಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯ ವರೆಗೆ ಕಾರ್ಯನಿರ್ವಹಿಸುತ್ತಿದ್ದವು. ಇದರಿಂದಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿಯೇ ಜಿಲ್ಲಾಡಳಿತ ಬ್ಯಾಂಕ್ ವ್ಯವಹಾರ ಅವಧಿಯಲ್ಲಿ ಬದಲಾವಣೆಯನ್ನು ಮಾಡಿದೆ.

ಮೇ 28 ರಿಂದ ಎಲ್ಲಾ ಬ್ಯಾಂಕುಗಳು ಬೆಳಗ್ಗೆ 8 ಗಂಟೆಯಿಂದಲೇ ಕಾರ್ಯಾರಂಭವನ್ನು ಮಾಡಲಿದ್ದು, ಗ್ರಾಹಕರಿಗೆ ಮಧ್ಯಾಹ್ನ 12 ಗಂಟೆಯ ವರೆಗೆ ಸೇವೆಯನ್ನು ನೀಡಲಿವೆ. ಆದರೆ ಬ್ಯಾಂಕುಗಳ ಕಚೇರಿ ಅವಧಿಯನ್ನು 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವ ವರೆಗೆ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.
ಬ್ಯಾಂಕುಗಳ ವ್ಯವಹಾರದ ಅವಧಿಯಲ್ಲಿ ಬದಲಾವಣೆಯಾಗಿರುವುದರಿಂದಾಗಿ ಗ್ರಾಹಕರಿಗೆ ಅನುಕೂಲವಾಗಲಿದೆ. ಮಾತ್ರವಲ್ಲ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಹಕಾರಿಯಾಗಲಿದೆ. ಇನ್ಮುಂದೆ ಬ್ಯಾಂಕ್ ನೆಪವನ್ನಿಟ್ಟುಕೊಂಡು ಮಧ್ಯಾಹ್ನ ರಸ್ತೆಗೆ ಇಳಿಯೋದಕ್ಕೆ ಸಾಧ್ಯವಿಲ್ಲ.