ಉಡುಪಿ : ಹೋಟೆಲ್ ಬಾಣಸಿಗನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ನಗರದ ಬನ್ನಂಜೆಯಲ್ಲಿರುವ ಸ್ವಾದಿಷ್ಟ್ ಹೋಟೆಲ್ ನ್ನು ಸೀಲ್ ಡೌನ್ ಮಾಡಲಾಗಿದೆ.

ಲಾಕ್ ಡೌನ್ ಸಂದರ್ಭದಲ್ಲಿಯೂ ಗ್ರಾಹಕರಿಗೆ ಪಾರ್ಸೆಲ್ ಸೇವೆಯನ್ನು ಸ್ವಾದಿಷ್ಟ ಹೋಟೆಲ್ ಒದಗಿಸುತ್ತಿತ್ತು. ಲಾಕ್ ಡೌನ್ ತೆರವಾಗುತ್ತಿದ್ದಂತೆಯೇ ಗ್ರಾಹಕರಿಗೆ ಸೇವೆಯನ್ನು ನೀಡುತ್ತಿತ್ತು. ಇದೀಗ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಮಾಡುವ ವ್ಯಕ್ತಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಾಣಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ಕ್ವಾರಂಟೈನ್ ಗೆ ಒಳಪಡಿಸಿದ್ದಾರೆ. ಅಲ್ಲದೇ ಹೋಟೆಲ್ ನ್ನು ಸೀಲ್ ಡೌನ್ ಮಾಡಲಾಗಿ

ಬಾಣಸಿಗನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ನಿವಾಸಿಗಳಿಗೆ ಆತಂಕ ಶುರುವಾಗಿದೆ. ಅದ್ರಲ್ಲೂ ಹೋಟೆಲ್ ನಿಂದ ಪಾರ್ಸೆಲ್ ಕೊಂಡು ಹೋಗಿರುವ ಗ್ರಾಹಕರಿಗೆ ನಡುಕ ಶುರುವಾಗಿದೆ.