Union Budget 2022: 2022ನೇ ಸಾಲಿನ ಸಂಸತ್ ಬಜೆಟ್ ಅಧಿವೇಶನವು ಜನವರಿ 31ರಿಂದ ಪ್ರಾರಂಭವಾಗಲಿದೆ. ಈ ಅಧಿವೇಶನದ ದ್ವಿತೀಯಾರ್ಧವು ಮಾರ್ಚ್ 14ರಂದು ಆರಂಭಗೊಳ್ಳಲಿದ್ದು ಏಪ್ರಿಲ್ 8ರಂದು ಕೊನೆಯಾಗಲಿದೆ. ಅಲ್ಲದೇ 2022ನೇ ಸಾಲಿನ ಕೇಂದ್ರ ಬಜೆಟ್ ಫೆಬ್ರವರಿ 1ನೇ ತಾರೀಖು ಮಂಡನೆಯಾಗಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಈ ಬಾರಿಯ ಕೇಂದ್ರ ಬಜೆಟ್ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ ಬಳಿಕ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಇನ್ನು ಬಜೆಟ್ ಅಧಿವೇಶನಕ್ಕೂ ಮುನ್ನಾದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಷಣ ಮಾಡಲಿದ್ದಾರೆ.ಇದಾ್ಗಿ 1 ತಿಂಗಳ ಬಳಿಕ ಅಧಿವೇಶನದ ಎರಡನೇ ಭಾಗವನ್ನು ಮಾರ್ಚ್ 14ರಿಂದ ಆರಂಭಿಸಲಾಗುತ್ತದೆ. ಈ ಅಧಿವೇಶನವು ಏಪ್ರಿಲ್ 8ನೇ ತಾರೀಖಿನವರೆಗೆ ನಡೆಯಲಿದೆ.
Budget session of Parliament to start on January 31 pic.twitter.com/fvcTIW32Jf
— ANI (@ANI) January 14, 2022
ದೇಶದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ಈ ನಡುವೆ ದೇಶದಲ್ಲಿ ಪ್ರತಿನಿತ್ಯ 2 ಲಕ್ಷಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದೆ. ಈ ನಡುವೆ ಸಂಸತ್ ಅಧಿವೇಶನಕ್ಕೂ ಮುಹೂರ್ತ ಫಿಕ್ಸ್ ಆದಂತಾಗಿದೆ. ಈಗಾಗಲೇ ಸಂಸತ್ನ 400ಕ್ಕೂ ಅಧಿಕ ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದು ಇದು ಕೂಡ ಆತಂಕದ ವಿಚಾರವಾಗಿದೆ.
Union Budget 2022: Budget session of Parliament to start on January 31
ಇದನ್ನು ಓದಿ : Nannamma Super Star samanvi : ನಟಿ ಅಮೃತಾ ನಾಯ್ಡು ಬಾಳಲ್ಲಿಇದೆಂತಾ ದುರಂತ : 2 ನೇ ಮಗು ಸಮನ್ವಿಯನ್ನು ಕಳೆದುಕೊಂಡ ಕಿರುತೆರೆ ನಟಿ
ಇದನ್ನೂ ಓದಿ : Karnataka Lockdown Fix : ಕರ್ನಾಟಕದಲ್ಲಿ 10 ದಿನಗಳ ಕಾಲ ಲಾಕ್‌ಡೌನ್ ಫಿಕ್ಸ್