Ram Mandir’s Garbhagriha : ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ರತಿಷ್ಠಿತ ರಾಮಮಂದಿರದ ಕಾಮಗಾರಿ ಕಾರ್ಯ ಭರದಿಂದ ಸಾಗಿದೆ. ಅಯೋಧ್ಯೆಗೆ ಇಂದು ಭೇಟಿ ನೀಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗರ್ಭಗುಡಿಯ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದರು. ಇಂದು ಗರ್ಭಗುಡಿ ಶಂಕುಸ್ಥಾಪನೆ ಕಾರ್ಯ ನೆರವೇರಿರುವ ಹಿನ್ನೆಲೆಯಲ್ಲಿ ಇನ್ಮುಂದೆ ಗರ್ಭಗುಡಿ ಕಾಮಗಾರಿ ಕಾರ್ಯ ಆರಂಭಗೊಳ್ಳಲಿದೆ.
ಅಯೋಧ್ಯೆಯಲ್ಲಿ ರಾಮ ಮಂದಿಯ ಗರ್ಭಗುಡಿಗೆ ಶಂಕುಸ್ಥಾಪನೆ ಕಾರ್ಯ ಕೈಗೊಂಡ ಯೋಗಿ ಆದಿತ್ಯನಾಥ್ ಗರ್ಭಗುಡಿ ಜಾಗಕ್ಕೆ ಪೂಜೆಯನ್ನು ನೆರವೇರಿಸಿ ಬಳಿಕ ಕಲ್ಲುಗಳಿಗೆ ಸಿಮೆಂಟ್ ಸುರಿದಿದ್ದಾರೆ. ಗರ್ಭಗುಡಿ ಶಂಕು ಸ್ಥಾಪನೆ ಕಾರ್ಯಕ್ಕೆ ಆಗಮಿಸುವ ಮುನ್ನ ಉತ್ತರ ಪ್ರದೇಶ ಸಿಎಂ ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
2020ರ ಆಗಸ್ಟ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಂಕು ಸ್ಥಾಪನೆ ಕಾರ್ಯ ನೆರವೇರಿಸಿದ್ದರು. ಇದಾದ ಬಳಿಕ ದೇವಾಲಯ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಇಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಮ ಮಂದಿರ ಗರ್ಭಗುಡಿಗೆ ಮೊದಲ ಶಿಲೆಯನ್ನಿಟ್ಟು ಪೂಜೆಯನ್ನು ಸಲ್ಲಿಸಿದರು.
ರಾಮಮಂದಿರ ಗರ್ಭಗುಡಿಗೆ ಶಂಕು ಸ್ಥಾಪನೆ ನೆರವೇರಿರುವ ಬಗ್ಗೆ ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ಅಯೋಧ್ಯೆ ರಾಮ ಮಂದಿರದ ಶಂಕು ಸ್ಥಾಪನೆ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಅಯೋಧ್ಯೆಯ 90 ಸಂತರು ಹಾಗೂ ಮಹಾಪುರುಷರಿಗೆ ಆಹ್ವಾನ ನೀಡಲಾಗಿತ್ತು ಎಂದು ಹೇಳಿದ್ದಾರೆ .
ಇದನ್ನು ಓದಿ : Brijesh Kallappa resigns : ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ: 20 ವರ್ಷಗಳ ಸಂಬಂಧಕ್ಕೆ ಅಂತ್ಯ ಹಾಡಿದ ಬ್ರಿಜೇಶ್ ಕಾಳಪ್ಪ
ಇದನ್ನೂ ಓದಿ : rape hubby’s friend :ಪತಿಯೊಂದಿಗೆ ಸಲುಗೆಯಿಂದಿದ್ದ ಮಹಿಳೆಯ ಮೇಲೆ ಗ್ಯಾಂಗ್ರೇಪ್ಗೆ ಸುಪಾರಿ ಕೊಟ್ಟ ಪತ್ನಿ
UP CM Yogi Adityanath Lays Foundation Stone For Ram Mandir’s Garbhagriha In Ayodhya