ಐಡಾ ಚಂಡಮಾರುತ : ಅಮೆರಿಕದ ನ್ಯೂಯಾರ್ಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ನ್ಯೂಯಾರ್ಕ್‌ : ಅಮೆರಿಕದ ನ್ಯೂಯಾರ್ಕ್‌ ಐಡಾ ಚಂಡಮಾರುತ ತಂದೊಡ್ಡಿರುವ ಮಹಾಮಳೆಗೆ ಅಕ್ಷರಶಃ ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ನ್ಯೂಯಾರ್ಕ್‌ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಶ್ವೇತ ಭವನ ಹೇಳಿಕೆ ಬಿಡುಗಡೆ ಮಾಡಿದೆ.

ಪ್ರವಾಹದಿಂದಾಗಿ ಸಂಕಷ್ಟದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ನೆರವು ಒದಗಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಗಿದೆ’ ಎಂದು ಶ್ವೇತ ಭವನ ಹೇಳಿದೆ. ಇಡಾ ಚಂಡಮಾರುತದ ಪರಿಣಾಮ ನ್ಯೂಯಾರ್ಕ್‌ ಸೇರಿದಂತೆ ಈಶಾನ್ಯ ಭಾಗದ ನಾಲ್ಕು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಪ್ರವಾಹದಲ್ಲಿ ಕನಿಷ್ಠ 44 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ತಾಲಿಬಾನ್ ಆಡಳಿತವನ್ನು ಮಾನ್ಯ ಮಾಡುವುದಕ್ಕೆ ಆತುರವೇನು ಇಲ್ಲ : ಅಮೇರಿಕ

ಅಮೆರಿಕ ಅಧ್ಯಕ್ಷ ಜೋ ಬಿಡೆನ್​ ಜನತೆಗೆ ಧೈರ್ಯ ತುಂಬುವ ಕೆಲಸ ಮಾಡಿದ್ದು, ಈ ಪರಿಸ್ಥಿತಿಯಲ್ಲಿ ನಾವೂ ನಿಮ್ಮೊಂದಿಗಿದ್ದೇವೆ. ದೇಶ ನಿಮ್ಮ ಸಹಾಯಕ್ಕಿದೆ ಎಂದು ಹೇಳಿದ್ದಾರೆ. ಪ್ರವಾಹದಿಂದಾಗಿ ನ್ಯೂಜೆರ್ಸಿ ಹಾಗೂ ನ್ಯೂಯಾರ್ಕ್​ನ ಮುಖ್ಯ ರಸ್ತೆಗಳು ಬಂದ್​ ಆಗಿವೆ.

ಅಗ್ನಿಶಾಮಕದಳ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ಥಳೀಯ ಮಾಧ್ಯಮದ ಮಾಹಿತಿಯ ಪ್ರಕಾರ ನ್ಯೂಜೆರ್ಸಿಯಲ್ಲಿ ಕನಿಷ್ಟ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಸಂಖ್ಯೆಯ ಜನರು ವಾಹನದೊಳಗೆ ಸಿಲುಕಿ ಸಾವನ್ನಪ್ಪಿದವರೇ ಇದ್ದಾರೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಗುಂಡು ಹಾರಿಸಿ ಸಂಭ್ರಮಿಸಿದ ತಾಲಿಬಾನಿಗಳು ! ಕಾರಣ ಕೇಳಿದ್ರೆ ಶಾಕ್‌ ಆಗುತ್ತೀರಿ !

(Hurricane Ida: Emergency Declaration in New York, USA)

Comments are closed.