ಲಖನೌ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ರಾಜಸ್ತಾನದ ಮಾಜಿ ರಾಜ್ಯಪಾಲ, ಬಿಜೆಪಿ ಹಿರಿಯ ನಾಯಕ ಕಲ್ಯಾಣ್ ಸಿಂಗ್ ( 89 ವರ್ಷ) ವಿಧಿವಶರಾಗಿದ್ದಾರೆ. ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದಾಗಿ ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಶನಿವಾರ ನಿಧನರಾದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ಕಲ್ಯಾಣ್ ಸಿಂಗ್ ಅವರನ್ನು ಜುಲೈ 4ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತೀವ್ರ ನಿಗಾಘಟಕದಲ್ಲಿ ಪ್ರಜ್ಞಾ ಹೀನ ಸ್ಥಿತಿಯಲ್ಲಿ ಅವರು ಚಿಕಿತ್ಸೆ ಯನ್ನು ಪಡೆಯುತ್ತಿದ್ದರು. ಶುಕ್ರವಾರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಕುಟುಂಬಸ್ಥರಿಗೆ ಮಾಹಿತಿಯನ್ನು ನೀಡಿದ್ದರು. ಆದ್ರಿಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿ ನಾಯಕರು ಈ ತಿಂಗಳು ಆಸ್ಪತ್ರೆಯಲ್ಲಿ ನಾಯಕನನ್ನು ಭೇಟಿ ಮಾಡಿದರು. ಶುಕ್ರವಾರ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಯಕನನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.
(Kalyan Singh Former Uttar Pradesh CM, Senior BJP Leader died at 89)