Vehicle Scrap: ವಾಯುಮಾಲಿನ್ಯ ತಡೆಯುವತ್ತ ಕೇಂದ್ರ ದಿಟ್ಟ ನಿರ್ಧಾರ; 15 ವರ್ಷ ಪೂರೈಸಿದ ಎಲ್ಲಾ ಸರ್ಕಾರಿ ವಾಹನಗಳು ಗುಜರಿಗೆ…

ದೆಹಲಿ: Vehicle Scrap: 15 ವರ್ಷ ಹಳೆಯ ಸರ್ಕಾರಿ ವಾಹನಗಳಿಗೆ ಸಂಬಂಧಿಸಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. 15 ವರ್ಷ ಹಳೆಯ ಎಲ್ಲಾ ಸರ್ಕಾರಿ ಸ್ವಾಮ್ಯದ ವಾಹನಗಳನ್ನು ಗುಜರಿಗೆ ಹಾಕಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಎಲ್ಲಾ ರಾಜ್ಯ ಸರ್ಕಾರಗಳಿಗೂ ಈ ಬಗ್ಗೆ ಮಾಹಿತಿ ರವಾನಿಸಿದೆ. ಬಸ್ ಗಳು, ಟ್ರಕ್ ಗಳು, ಮತ್ತು ಕಾರುಗಳು ಸೇರಿದಂತೆ ಎಲ್ಲಾ ರೀತಿಯ ಹಳೆಯ ವಾಹನಗಳನ್ನು ಗುಜರಿಗೆ ಹಾಕಲಾಗುವುದು. ಪ್ರತಿದಿನ ರಸ್ತೆಗೆ ಇಳಿಯಲಿರುವ ಎಲ್ಲಾ ಹಳೆಯ ವಾಹನಗಳ ಸಂಚಾರ ಬಂದ್ ಮಾಡಲಾಗುವುದು. ಹೊಸ ವಾಹನಗಳಿಗೆ ಹೋಲಿಸಿದರೆ ಈ ವಾಹನಗಳು ಶೇ.10ರಿಂದ 12ರಷ್ಟು ಅಧಿಕ ಪ್ರಮಾಣದಲ್ಲಿ ವಾಯುಮಾಲಿನ್ಯ ಉಂಟುಮಾಡುತ್ತಿವೆ. ಈ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಇದನ್ನೂ ಓದಿ: Hero MotoCorp: ಡಿಸೆಂಬರ್‌ 1ರಿಂದ ದುಬಾರಿಯಾಗಲಿರುವ ಹೀರೋ ದ್ವಿಚಕ್ರ ವಾಹನಗಳು

ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ 15 ವರ್ಷ ಹಳೆಯ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವ ಕಡತಕ್ಕೆ ಸಹಿ ಮಾಡಿದ್ದೇನೆ. ಭಾರತ ಸರ್ಕಾರದ ಈ ನೀತಿಯನ್ನು ಎಲ್ಲಾ ರಾಜ್ಯಗಳಿಗೂ ಕಳುಹಿಸಲಾಗಿದೆ. ದೇಶದ ಪ್ರತಿ ಸರ್ಕಾರವೂ ಈ ನೀತಿಯನ್ನು ರಾಜ್ಯಮಟ್ಟದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ಪರಿಹರಿಸುವ ಉದ್ದೇಶದಿಂದ ಸರ್ಕಾರವು ಈ ವರ್ಷದ ಆರಂಭದಲ್ಲಿ ವಾಹನ ಸ್ಕ್ರ್ಯಾಪ್ ನೀತಿಯನ್ನು ಘೋಷಿಸಿತ್ತು. ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿ 2-3 ವಾಹನಗಳನ್ನು ಸ್ಕ್ರ್ಯಾಪಿಂಗ್ ಸೌಲಭ್ಯಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಸಚಿವ ನಿತಿನ್ ಗಡ್ಕರಿ ಈ ಹಿಂದೆ ಹೇಳಿದ್ದರು. ರಸ್ತೆಗಳ ನಿರ್ಮಾಣಕ್ಕಾಗಿ ಹಳೆಯ ಟೈರ್ ಗಳಂತಹ ಸ್ಕ್ರ್ಯಾಪ್ ಮಾಡಿದ ವಾಹನಗಳ ಭಾಗಗಳನ್ನು ಬಳಸಿಕೊಳ್ಳಲಾಗುವುದು ಎಂದು ಕೂಡಾ ಸಚಿವರು ತಿಳಿಸಿದ್ದರು.

2018ರ ಅಕ್ಟೋಬರ್ ನಲ್ಲಿ ಸರ್ಕಾರವು ವಾಹನ ಸ್ಕ್ರ್ಯಾಪೇಜ್ ನೀತಿಯನ್ನು ಘೋಷಿಸುವ ಮೊದಲು ದೆಹಲಿ- NCRನಲ್ಲಿ 15 ವರ್ಷ ಹಳೆಯ ಪೆಟ್ರೋಲ್ ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿತ್ತು. 2014ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ 15 ವರ್ಷಕ್ಕಿಂತ ಹಳೆಯದಾದ ವಾಹನಗಳನ್ನು ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಓಡಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: Similar Accident case: ಹೊನ್ನಾಳಿ ಚಂದ್ರಶೇಖರ್‌ ಸಾವನ್ನು ಹೋಲುತ್ತಿದೆ ಈ ದುರ್ಘಟನೆ

Vehicle Scrap: Government vehicles that are 15-year-old will be scrapped says central minister Nithin Gadkari

Comments are closed.