ಮುಂದಿನ ಐದು ದಿನ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ನವದೆಹಲಿ : ಮುಂದಿನ ಐದು ದಿನಗಳ ಕಾಲ ಭಾರತ ಹಲವು ರಾಜ್ಯಗಳಲ್ಲಿ ಭಾರೀ (Weather report today) ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಇಂದು ( ಏಪ್ರಿಲ್ 9) ರಂದು ಗುಡುಗು ಸಹಿತ ಭಾರೀ ಪ್ರಮಾಣದಲ್ಲಿ ಗಾಳಿ ಬೀಸಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. ಇನ್ನು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಏಪ್ರಿಲ್ 9 ಮತ್ತು 10 ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಮಧ್ಯ ಭಾರತದ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭದಲ್ಲಿ ಲಘು ಹಾಗೂ ಮಧ್ಯಮ ಪ್ರಮಾಣದಲ್ಲಿ ಮಳೆ ಸುರಿಯಲಿದ್ರೆ, ಪೂರ್ವ ಭಾರತದ ಒಡಿಶಾ ಮತ್ತು ಜಾರ್ಖಂಡ್ ಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ಒಂದೆಡೆ ಅಕಾಲಿಕ ಮಳೆ ಸುರಿಯುತ್ತಿದ್ರೆ, ಇನ್ನೊಂದೆಡೆಯಲ್ಲಿ ಮುಂದಿನ ಐದು ದಿನಗಳ ಕಾಲ ತಾಪಮಾನದಲ್ಲಿಯೂ ಏರಿಕೆಯನ್ನು ಕಾಣಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ : 15 ವರ್ಷಗಳ ಪಿಪಿಎಫ್‌ ಖಾತೆಯಲ್ಲಿ ಹೂಡಿಕೆ ಮಾಡುವುದು ಲಾಭದಾಯಕವೇ ?

ಇದನ್ನೂ ಓದಿ : Aadhaar Latest News : ಮೃತರ ಆಧಾರ್ ನಿಷ್ಕ್ರಿಯ ಅಸಾಧ್ಯವೆಂದು ಕೇಂದ್ರ ಸರಕಾರ

ವಾಯುವ್ಯ ಮತ್ತು ಪರ್ಯಾಯ ದ್ವೀಪದ ಭಾಗಗಳನ್ನು ಹೊರತುಪಡಿಸಿ ದೇಶದ ಹಲವಾರು ಭಾಗಗಳು ಏಪ್ರಿಲ್‌ನಿಂದ ಜೂನ್‌ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಆಂತರಿಕ ಒಡಿಶಾ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್ ಪ್ರದೇಶ ಮತ್ತು ರಾಯಲಸೀಮಾದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 38-39 ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನ: 30 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ಉಡುಪಿ : ಜಿಲ್ಲಾದ್ಯಂತ ಏ. 11 ರಂದು ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾದ್ಯಂತ ವಿದ್ಯುತ್‌ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಕಾರಣದಿಂದಾಗಿ ಮೆಸ್ಕಾಂ ಏಪ್ರಿಲ್ 11 ರಂದು ಜಿಲ್ಲಾದ್ಯಂತ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹಾಗಿದ್ದರೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

33/11 ಕೆ.ವಿ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ತಲ್ಲೂರು ಉಪಕೇಂದ್ರದಿಂದ ಹೊರಡುವ 11 ಕೆ.ವಿ ಹೆಮ್ಮಾಡಿ, ಗುಲ್ವಾಡಿ, ವಂಡ್ಸೆ, ನೇರಳಕಟ್ಟೆ, ಬಾಂಡ್ಯ, ಕೆಂಚನೂರು, ದೇವಲ್ಕುಂದ ಮತ್ತು ಸಬ್ಲಾಡಿ ಹಾಗೂ 33/11 ಕೆ.ವಿ ಗಂಗೊಳ್ಳಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮುಳ್ಳಿಕಟ್ಟೆ, ತ್ರಾಸಿ, ಗಂಗೊಳ್ಳಿ ಫೀಡರುಗಳ ವಂಡ್ಸೆ, ಚಿತ್ತೂರು, ಬೆಳ್ಳಾಲ, ಜಡ್ಕಲ್, ಆನಗಳ್ಳಿ, ಉಪ್ಪಿನಕುದ್ರು, ತಲ್ಲೂರು, ಇಡೂರು-ಕುಂಜ್ಞಾಡಿ, ಮುದೂರು, ಹೊಸೂರು, ಕರ್ಕುಂಜೆ, ಕಾವ್ರಾಡಿ, ಅಂಪಾರು, ಬೆಳ್ಳಾಲ, ಕೆರಾಡಿ, ಆಜ್ರಿ, ಕೊಡ್ಲಾಡಿ, ಹೇರಿಕುದ್ರು, ಗುಲ್ವಾಡಿ, ಬಾಂಡ್ಯ, ತಲ್ಲೂರು, ಉಪ್ಪಿನಕುದ್ರು, ಹಟ್ಟಿಯಂಗಡಿ, ಕನ್ಯಾನ, ಕೆಂಚನೂರು, ನೇರಳಕಟ್ಟೆ ಹೆಮ್ಮಾಡಿ, ಕಟ್ಬೆಲ್ತೂರು ಮತ್ತು ದೇವಲ್ಕುಂದ, ಮುಳ್ಳಿಕಟ್ಟೆ, ಗಂಗೊಳ್ಳಿ, ಹೊಸಾಡು, ಗುಜ್ಜಾಡಿ ಮತ್ತು ತ್ರಾಸಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸದರಿ ಎಂ.ಯು.ಎಸ್.ಎಸ್ ನಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಮಾರ್ಗಗಳಾದ ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ, ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಠಾರು, ಪದವು, ಪಾಂಬೂರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು, ಬಡಾ ಮೂಳೂರು, ಬೆಳಪು, ಮಲ್ಲಾರು, ಅಬ್ಬೆಟ್ಟು, ಪಾದೂರು ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಚೇರ್ಕಾಡಿ, ಉಪ್ಪೂರು, ಹೊನ್ನಾಳ, ಕೊಳಲಗಿರಿ ಫೀಡರ್ ಮಾರ್ಗ ಹಾಗೂ 110/11 ಕೆ.ವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಶಾಂತಿವನ ಫೀಡರ್ ಮಾರ್ಗ ಮತ್ತು 110/11 ಕೆ.ವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಮಂದಾರ್ತಿ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿ.ರೋಡ್, ಕೋಟೆರೋಡ್, ನಿಡಂಬಳ್ಳಿ, ಕಲ್ಯಾಣಪುರ, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಉಗ್ಗೇಲ್ಬೆಟ್ಟು, ಜಾತಾಬೆಟ್ಟು, ಹಾವಂಜೆ, ಮಂದಾರ್ತಿ, ಕಾಡೂರು, ತಂತ್ರಾಡಿ, ಹೆಗ್ಗುಂಜೆ, ಕಾಡೂರು, ನಡೂರು, ಹೆಬ್ಬಾಡಿ, ಗೋಪಾಲಪುರ, ಶಾಂತಿವನ, ಗರಡಿಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Weather report today: Heavy rain for the next five days: Meteorological Department warns

Comments are closed.