Accident 18 Dead : ಪಾರ್ಥಿವ ಶರೀರ ಕೊಂಡೊಯುತ್ತಿದ್ದ ವಾಹನಕ್ಕೆ ಟ್ರಕ್‌ ಢಿಕ್ಕಿ : 18 ಸಾವು, 5 ಮಂದಿ ಗಂಭೀರ

ಕೋಲ್ಕತ್ತಾ : ಸ್ಮಶಾನಕ್ಕೆ ಪಾರ್ಥವ ಶರೀರ ಕೊಂಡೊಯ್ಯುವ ವಾಹನ ಹಾಗೂ ಟ್ರಕ್‌ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ18 ಮಂದಿ ಸಾವನ್ನಪ್ಪಿ ( Accident 18 Dead), 5 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಪಶ್ವಿಮ ಬಂಗಾಲದಲ್ಲಿ ನಡೆದ ಅತೀ ದೊಡ್ಡ ಅಪಘಾತವಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಉತ್ತರ 24 ಪರಗಣದ ಬಗ್ಡಾದಿಂದ ನವದ್ವೀಪ ಸ್ಮಶಾನದ ಕಡೆಗೆ ಪಾರ್ಥಿವ ಶರೀರವನ್ನು ಹೊತ್ತು ಶವಸಂಸ್ಕಾರಕ್ಕೆ ಸಾಗಿಸುವ ವಾಹನ ಹಂಸಖಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಡಿಯಾದ ಫುಲ್ಬರಿ ಪ್ರದೇಶದಲ್ಲಿ ರಸ್ತೆಯಲ್ಲಿ ನಿಂತಿತ್ತು. ವೇಗವಾಗಿ ಬಂದ ಟ್ರಕ್‌ ಶವ ಸಾಗಾಟ ಮಾಡುವ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದಾಗಿ ವಾಹನದಲ್ಲಿದ್ದ ಇಪತ್ತಕ್ಕೂ ಅಧಿಕ ಜನರ ಪೈಕಿ ಸ್ಥಳದಲ್ಲಿಯೇ 18 ಜನರು ಸಾವನ್ನಪ್ಪಿದ್ದರೆ, ಐದು ಮಂದಿ ಗಾಯಗೊಂಡಿದ್ದು. ಗಾಯಾಳುಗಳನ್ನು ಶಕ್ತಿನಗರ ಜಿಲ್ಲಾಸ್ಪತ್ತೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗು ತ್ತಿದೆ. ಪಶ್ಚಿಮ ಬಂಗಾಲದಲ್ಲಿ ರಾತ್ರಿ ದಟ್ಟವಾದ ಮಂಜು ಆವರಿಸಿತ್ತು. ಹೀಗಾಗಿ ಹೆದ್ದಾರಿಯಲ್ಲಿ ಚಾಲನೆ ಮಾಡುವ ವೇಳೆಯಲ್ಲಿ ರಸ್ತೆ ಸರಿಯಾಗಿ ಗೋಚರವಾಗುತ್ತಿರಲಿಲ್ಲ. ಅಲ್ಲದೇ ಟ್ರಕ್‌ ಚಾಲಕ ಅತೀ ವೇಗದಿಂದ ವಾಹನವನ್ನು ಚಾಲನೆ ಮಾಡಿದ ಹಿನ್ನೆಲೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಭೀಕರ ರಸ್ತೆ ಅಪಘಾತದ ಬೆನ್ನಲ್ಲೇ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಪೊಲೀಸ್‌ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಅಪಘಾತ ನಡೆಯುತ್ತಲೇ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಇನ್ನು ಘಟನೆಯ ಬೆನ್ನಲ್ಲೇ ರಾಜ್ಯಪಾಲ ಜಗದೀಪ್ ಧಂಖರ್ ಸಂತಾಪ ಸೂಚಿಸಿದ್ದಾರೆ. ಇನ್ನು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹಾಗೂ ಗಾಯಳುಗಳಿಗೆ ಪರಿಹಾರ ನೀಡುವಂತೆ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ನವೆಂಬರ್‌ 30ರ ವರೆಗೆ ಭಾರೀ ಮಳೆ : 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಇನ್ನೊಂದೆಡೆಯಲ್ಲಿ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಲಾರಿ ಪಲ್ಟಿಯಾಗಿ 4 ಮಂದಿ ಸಾವನ್ನಪ್ಪಿದ್ದಾರೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯಲ್ಲಿ ಬಂಡೆಗಳನ್ನು ತುಂಬಿದ ಲಾರಿಯೊಂದು ಪಲ್ಟಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಮೂವರು ಗಾಯಗೊಂಡಿದ್ದಾರೆ. ಉರುಳಿಬಿದ್ದ ಲಾರಿಯನ್ನು ಕ್ರೇನ್‌ ಮೂಲಕ ಮೇಲಕ್ಕೆತ್ತ ಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಏಳು ಮಂದಿಯನ್ನು ರಕ್ಷಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸುವ ಕಾರ್ಯವನ್ನು ಮಾಡಲಾಗಿದೆ.

ಇದನ್ನೂ ಓದಿ : SDM ಕಾಲೇಜಿನಲ್ಲಿ ಕೊರೊನಾ ಸ್ಪೋಟ : 306 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಇದನ್ನೂ ಓದಿ :  ಕರ್ನಾಟಕಕ್ಕೆ ಒಮಿಕ್ರಾನ್‌ ಭೀತಿ : ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೊನಾ ಸೋಂಕು ದೃಢ !

( Accident 18 Dead, 5 Injured After Vehicle Rams Into Lorry In West Bengal)

Comments are closed.