ಕೋಲ್ಕತಾ : ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಕಾವು ಹೆಚ್ಚಾಗುತ್ತಿದೆ. ಅದ್ರಲ್ಲೂ ಚುನಾವಣಾ ಪ್ರಚಾರದ ವೇಳೆಯಲ್ಲಿ ಗಾಯಗೊಂಡಿದ್ದಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.
ಮಮತಾ ಬ್ಯಾನರ್ಜಿ ಗಾಲಿ ಕುರ್ಚಿಯ ಮೇಲೆ ಕುಳಿತು ನೋವಿನ ಅರಿವೇ ಇಲ್ಲದಂತೆ ಗಾಯಗೊಂಡ ಕಾಲನ್ನು ಅಲುಗಾಡಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕರಾದ ತೇಜೀಂದರ್ ಬಗ್ಗಾ, ಪ್ರಣಯ್ ರಾಯ್, ಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ಸೇರಿದಂತೆ ಅನೇಕರು ಟ್ವಿಟ್ ಮಾಡಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಮತಾ ವಿರುದ್ದ ಟೀಕೆಗೆ ಇಂಬು ನೀಡುತ್ತಿದ್ದು, ಮಮತಾ ನಾಟಕ ಮಾಡುತ್ತಿದ್ದಾರೆ ಅನ್ನೋ ಆರೋಪವನ್ನು ಮಾಡುತ್ತಿದ್ದಾರೆ.