ನಾಳೆ ಕೇಂದ್ರದಿಂದ ಬಜೆಟ್ ಮಂಡನೆ : ಮಧ್ಯಮವರ್ಗಗಳ ಆಶೋತ್ತರಗಳಿಗೆ ಸಿಗಲಿದ್ಯಾ ಸ್ಪಂದನೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. 2026-27ನೇ ಸಾಲಿನ ಕೇಂದ್ರ ಬಜೆಟ್ ಇದಾಗಿದ್ದು, ಯಾವೆಲ್ಲ ಕ್ಷೇತ್ರಗಳಿಗೆ ಮೋದಿ ಸರ್ಕಾರ ಬೂಸ್ಟ್ ನೀಡಲಿದೆ ಎಂಬ ಕುತೂಹಲ ಸಹಜವಾಗಿಯೇ ಎಲ್ಲರಲ್ಲಿ ಮನೆ ಮಾಡಿದೆ.
ವಿಶ್ವದ ಮೂರನೇ ಅತೀದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರ ಯಾವ ರೀತಿಯಲ್ಲಿ ಭಾರತದಲ್ಲಿ ಬಂಡವಾಳಗಳನ್ನು ಹೆಚ್ಚಿಸುವ ಕ್ರಮ ಕೈಗೊಳ್ಳಬಹುದು ಎಂಬ ನಿರೀಕ್ಷೆಯಿದೆ. ಭಾರತದಲ್ಲಿ ಹೂಡಿಕೆಗಳನ್ನು ಹೆಚ್ಚಿಸಲು ಉದ್ಯೋಗ ಸೃಷ್ಠಿಗೆ ಈ ಬಜೆಟ್ನಲ್ಲಿ ಹೆಚ್ಚಿನ ಆಧ್ಯತೆ ನೀಡಬಹುದು ಎಂದು ನಿರೀಕ್ಷಿಸಲಾಗಿದೆ.
ಆದಾಯ ತೆರಿಗೆ ವಿನಾಯಿತಿ ಕುರಿತಂತೆ ದೇಶದ ಜನತೆ ದೃಷ್ಠಿ ನೆಟ್ಟಿದ್ದು, ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 75 ಸಾವಿರ ರೂ.ದಿಂದ 1 ಲಕ್ಷ ರೂ.ಗೆ ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದ 13 ಲಕ್ಷ ರೂಪಾಯಿಗಳವರೆಗೆ ಆದಾಯ ಪಡೆಯುವವರು ತೆರಿಗೆ ವಿನಾಯಿತಿ ಪಡೆಯಲಿದ್ದಾರೆ. ಇದಿರಂದ ಮಧ್ಯಮ ವರ್ಗಕ್ಕೆ ಭಾರೀ ಪ್ರಮಾಣದ ಲಾಭ ಆಗಲಿದೆ.
ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಛೀಮಾರಿ: ಫ್ರೀಂ ಸ್ಕೀಂಗಳಿಂದ ಆರ್ಥಿಕತೆ ವಿನಾಶ ‘ಗ್ಯಾರಂಟಿ’
ಈಗಾಗಲೇ ಮ -ನರೇಗಾ ಯೋಜನೆ ರದ್ದುಗೊಳಿಸುವ ಮೂಲಕ ಕಾರ್ಮಿಕ ವಲಯದ ಕೆಂಗಣ್ಣಿಗೆ ಗುರಿಯಾಗಿರುವ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಅಭ್ಯುದಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದೆ ಎನ್ನಲಾಗಿದೆ. ಏಕೀಕೃತ ರಾಷ್ಟ್ರೀಯ ಉದ್ಯೋಗ ನೀತಿ’ಯನ್ನು ಕೇಂದ್ರ ಬಜೆಟ್ನಲ್ಲಿ ಮಂಡಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಅಲ್ಲದೇ ಸರ್ಕಾರಿ ಸೇವೆಗಳನ್ನು ಗುಣಮಟ್ಟದ ರೀತಿಯಲ್ಲಿ ಗ್ರಾಮೀಣ ಜನತೆಗೆ ಸಿಗುವಂತೆ ಮಾಡುವಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಇನ್ನುಳಿದಂತೆ ಆರೋಗ್ಯ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಮಧ್ಯಮ ವರ್ಗ, ಸಾರಿಗೆ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ವಿವಿಧ ಬೇಡಿಕೆಗಳಿದ್ದು ಇದನ್ನೆಲ್ಲ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಯಾವ ರೀತಿಯಲ್ಲಿ ಸರಿದೂಗಿಸಿದ್ದಾರೆ ಎಂಬ ಕುತೂಹಲಕ್ಕೆ ನಾಳೆ ತೆರೆ ಬೀಳಲಿದೆ.



