ಸಿಡಿಎಸ್ ಜನರಲ್ ದಿವಂಗತ ಬಿಪಿನ್ ರಾವತ್ರನ್ನು(Gen Bipin Rawat) ಸೋಶಿಯಲ್ ಮೀಡಿಯಾದಲ್ಲಿ ಯುದ್ಧ ಅಪರಾಧಿ ಎಂದು ಜರಿದು ಜೈಲುಪಾಲಾಗಿದ್ದ ಹಾಜಿ ಪಬ್ಲಿಕ್ ಸ್ಕೂಲ್ನ ಮಾಜಿ ನಿರ್ದೇಶಕಿ ಸಭಾ ಹಾಜಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ 8ರಂದು ತಮಿಳುನಾಡಿನ ಕೂನುರ್ನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಮೃತಪಟ್ಟ ದಿನದಂದೇ ಸಭಾ ಹಾಜಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಸಭಾರ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ನೆಟ್ಟಿಗರು ಇವರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕೆಂದು ಪಟ್ಟು ಹಿಡಿದಿದ್ದರು. ಈ ವಿಷಯ ಸಾಕಷ್ಟು ಸಂಚಲನ ಮೂಡಿಸಿದ ಬೆನ್ನಲ್ಲೇ ಜಮ್ಮು & ಕಾಶ್ಮೀರದ ದೋಡಾ ಜಿಲ್ಲೆಯ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಹಾಜಿ ವಿರುದ್ಧ ತನಿಖೆಗೆ ಆದೇಶಿಸಿದ್ದರು.
ಡಿಸೆಂಬರ್ 14ರಿಂದ 17ರವರೆಗೆ ಮೂರು ದಿನಗಳ ಕಾಲ ಬೆಳಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ದೋಡಾದ ಮಹಿಳಾ ಪೊಲೀಸ್ ಠಾಣೆಯಲ್ಲಿ ಹಾಜರಿರಬೇಕು ಹಾಗೂ ಡಿಸೆಂಬರ್ 17ರಂದು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆಯೂ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಿ ಹಾಜಿಗೆ ಜಾಮೀನು ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಹಾಜಿ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಅನೇಕರು ಆಕೆ ಶಿಕ್ಷಕಿ ಹಾಗೂ ನಿರ್ದೇಶಕಿಯಾಗಿದ್ದ ದೋಡಾದ ಹಾಜಿ ಪಬ್ಲಿಕ್ ಶಾಲೆಯನ್ನು ಮುಚ್ಚಬೇಕು ಎಂದು ಆಗ್ರಹಿಸಿದ್ದರು. ಈ ಕೂಗು ಹೆಚ್ಚಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿದ ಶಾಲೆಯ ಆಡಳಿತ ಮಂಡಳಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಬಗ್ಗೆ ಸಭಾ ನೀಡಿರುವ ಹೇಳಿಕೆಯು ಶಾಲೆಯ ದೃಷ್ಟಿಕೋನವಲ್ಲ ಎಂದು ಹೇಳಿದೆ.
ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಮಂದಿ ಅವಘಡ ನಡೆದ ದಿನವೇ ಮೃತಪಟ್ಟಿದ್ದರು. ಈ ದುರಂತದಲ್ಲಿ ಗಾಯಗೊಂಡಿದ್ದ ಏಕೈಕ ಸೇನಾನಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಮಿಲಿಟರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
Woman who insulted Gen Bipin Rawat on social media released on bail
ಇದನ್ನು ಓದಿ :Woman consumes sanitiser : ಸ್ಯಾನಿಟೈಸರ್ ಸೇವಿಸಿ ಆತ್ಮಹತ್ಯೆಗೆ ಯತ್ನ: ಮಹಿಳೆಯನ್ನು ಖಾಕಿ ರಕ್ಷಿಸಿದ ಪರಿಯೇ ರೋಚಕ
ಇದನ್ನೂ ಓದಿ : woman shoots at boyfriend : ಪ್ರೀತಿಯಲ್ಲಿ ಹೆಚ್ಚಿದ ಅಂತರ; ಪ್ರಿಯತಮೆಯಿಂದಲೇ ಪ್ರಿಯತಮನ ಮೇಲೆ ಫೈರಿಂಗ್..!