ಈದ್ ಮಿಲಾದ್: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಣೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಘೋಷಿಸಲಾಗಿದ್ದ ಸಾರ್ವತ್ರಿಕ ರಜೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ

By ಅನಿಲ್‌ ಗುಂಡ್ಮಿ | Anil Gundmi

1 min read

WhatsAppPost
Eid Milad Holiday announced for Dakshina Kannada Udupi districts on August 25
Eid Milad Holiday announced for Dakshina Kannada Udupi districts on August 25

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಘೋಷಿಸಲಾಗಿದ್ದ ಸಾರ್ವತ್ರಿಕ ರಜೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಘೋಷಿಸಲಾಗಿದ್ದ ಸಾರ್ವತ್ರಿಕ ರಜೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ಹಿಂದೆ ಆಗಸ್ಟ್ 26, 2026ರಂದು ಘೋಷಿಸಲಾಗಿದ್ದ ರಜೆಯನ್ನು ಇದೀಗ ಆಗಸ್ಟ್ 25, 2026ಕ್ಕೆ ಮುಂಚಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳ ಮನವಿಯ ಮೇರೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸ್ಥಳೀಯ ಪರಿಸ್ಥಿತಿ ಹಾಗೂ ಈದ್ ಮಿಲಾದ್ ಆಚರಣೆಯ ದಿನಾಂಕವನ್ನು ಪರಿಗಣಿಸಿ ರಜೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈದ್ ಮಿಲಾದ್ ಹಬ್ಬವನ್ನು ಕರಾವಳಿ ಭಾಗದಲ್ಲಿ ಆಗಸ್ಟ್ 25ರಂದು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ರಜೆಯನ್ನು ಅದೇ ದಿನ ಘೋಷಿಸುವಂತೆ ಹಲವು ಮುಸ್ಲಿಂ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಮನವಿ ಸಲ್ಲಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರೂ ಸರ್ಕಾರಕ್ಕೆ ಕುರಿತು ಮನವಿ ಮಾಡಿದ್ದರು.

ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಹೊರಡಿಸಿರುವ ಆದೇಶದಲ್ಲಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆಗಸ್ಟ್ 20ರಂದು ರಜೆಯ ದಿನಾಂಕ ಬದಲಾವಣೆ ಕೋರಿ ಸಲ್ಲಿಸಿದ್ದ ಪತ್ರಗಳನ್ನು ಉಲ್ಲೇಖಿಸಲಾಗಿದೆ.

 ಆದೇಶದ ಪ್ರಕಾರ, ಸ್ಥಳೀಯ ಪರಿಸ್ಥಿತಿ ಹಾಗೂ ಜಾರಿಯಲ್ಲಿರುವ ನಿಯಮಗಳನ್ನು ಪರಿಗಣಿಸಿ, ಆಗಸ್ಟ್ 26 ಬದಲಿಗೆ ಆಗಸ್ಟ್ 25ರಂದು ಈದ್ ಮಿಲಾದ್ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಿಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಮ್ಮ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಬಹುದು ಎಂದು ತಿಳಿಸಲಾಗಿದೆ.

  ತೀರ್ಮಾನದಂತೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಕಚೇರಿಗಳು ಹಾಗೂ ರಾಜ್ಯ ಸರ್ಕಾರದ ಸಾರ್ವತ್ರಿಕ ರಜೆ ಅನ್ವಯಿಸುವ ಇತರೆ ಸಂಸ್ಥೆಗಳಿಗೆ ಆಗಸ್ಟ್ 26 ಬದಲಾಗಿ ಆಗಸ್ಟ್ 25ರಂದು ಈದ್ ಮಿಲಾದ್ ಪ್ರಯುಕ್ತ ಸಾರ್ವತ್ರಿಕ ರಜೆ ಇರಲಿದೆ.

Topics

ಸಂಬಂಧಿತ ಸುದ್ದಿಗಳು