Kannada News Next

india

ಅಪಾರ್ಟಮೆಂಟ್‌ನ 30ನೇ ಮಹಡಿಯಿಂದ ಜಿಗಿದು 29 ವರ್ಷದ ಟೆಕ್ಕಿ ಸಾವು

ಮೃತ ಟೆಕ್ಕಿಯನ್ನು ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯವ ಮೂಲದವರು ಎಂದು ತಿಳಿದು ಬಂದಿದ್ದು, ಬೆಂಗಳೂರು ಮೂಲದ ಐಟಿ (IT) ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು

By Arun Gundmi | ಅರುಣ್‌ ಗುಂಡ್ಮಿ Editor-in-Chief
29-year-old Software Engineer dies after jumping from 30th floor of apartment Telangana

ಹೈದ್ರಾಬಾದ್‌ : ಅಪಾರ್ಟ್‌ಮೆಂಟ್‌ನ 30ನೇ ಮಹಡಿಯಿಂದ ಜಿಗಿದು 30 ವರ್ಷದ ಟೆಕ್ಕಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ನಾನಕ್‌ರಾಮ್‌ಗುಡಾದಲ್ಲಿರುವ ಗೇಟೆಡ್ ಕಮ್ಯುನಿಟಿ ವಸತಿ ಸಮುಚ್ಚಯದಲ್ಲಿ ನಡೆದಿದೆ.

ಮೃತ ಟೆಕ್ಕಿಯನ್ನು ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯವ ಮೂಲದವರು ಎಂದು ತಿಳಿದು ಬಂದಿದ್ದು, ಬೆಂಗಳೂರು ಮೂಲದ ಐಟಿ (IT) ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಗಚಿಬೌಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ತಡರಾತ್ರಿ ವಸತಿ ಸಮುಚ್ಚಯದ ಪಾರ್ಕಿಂಗ್‌ ಪ್ರದೇಶದಲ್ಲಿ 29 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಸತಿ ಸಮುಚ್ಚಯದ 30ನೇ ಮಹಡಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಪಾರ್ಟ್‌ಮೆಂಟ್‌ನಿಂದ ಜಿಗಿದ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದರೂ ಕೂಡ, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತ ವ್ಯಕ್ತಿಯ ಸಹೋದರ ಸಂಬಂಧಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಉಸ್ಮಾನಿಯ ಜನರಲ್‌ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಕಾರ್ಯವನ್ನು ನಡೆಸಲಾಗಿದೆ. ಈ ಕುರಿತು ಗಚಿಬೌಲಿ ಪೊಲೀಸ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.