Kannada News Next

india

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದ ಏರುಪೇರು : ಆಸ್ಪತ್ರೆಗೆ ದಾಖಲು

ನವದೆಹಲಿ : ಮಾಜಿ ಉಪಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ ( Lal Krishna Advani) ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

By Arun Gundmi | ಅರುಣ್‌ ಗುಂಡ್ಮಿ Editor-in-Chief
lk Advani hospitalized health update

ನವದೆಹಲಿ : ಮಾಜಿ ಉಪಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ ( Lal Krishna Advani) ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಉಸಿರಾಟದ ಸಮಸ್ಯೆ ಮತ್ತು ಎದೆಯಲ್ಲಿನ ಸೋಂಕಿನ ಸಮಸ್ಯೆಯ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 98 ವರ್ಷದ ಅಡ್ವಾಣಿ ಅವರ ಆರೋಗ್ಯದ ಮೇಲೆ ದೆಹಲಿಯ ಅಪೋಲೋ ಆಸ್ಪತ್ರೆಯ ತಜ್ಞ ವೈದ್ಯರ ತಂಡ ವಿಶೇಷ ನಿಗಾ ಇರಿಸಿ ಚಿಕಿತ್ಸೆಯನ್ನು ನೀಡುತ್ತಿದೆ.

ಮೇ ತಿಂಗಳಿನಲ್ಲಿಯೂ ಅಡ್ವಾಣಿ ಅವರಿಗೆ ಆರೋಗ್ಯ ಸಮಸ್ಯೆ ಕಾಡಿತ್ತು. ಹೀಗಾಗಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗಿತ್ತು. ಅವರು ಚೇತರಿಸಿಕೊಂಡ ನಂತರದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದರು. ಆದರೆ ಇದೀಗ ಅವರಿಗೆ ಎದೆ ನೋವಿನ ಸಮಸ್ಯೆ ಹಾಗೂ ಉಸಿರಾಟದ ಸಮಸ್ಯೆಗೆ ದುರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರ ಆರೋಗ್ಯ ಸದ್ಯಕ್ಕೆ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಲಾಲ್‌ ಕೃಷ್ಣ ಅಡ್ವಾಣಿ ಅವರು ಭಾರತದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. 1986ರಿಂದ 1990, 1993ರಿಂದ 1998 ಹಾಗೂ 2004ರಿಂದ 2005 ಸೇರಿದಂತೆ ಒಟ್ಟು ಮೂರು ಬಾರಿ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅಯೋಧ್ಯಾ ರಾಮಮಂದಿರ ಹೋರಾಟದಲ್ಲಿಯೂ ಎಲ್‌ಕೆ ಅಡ್ವಾಣಿ ಅವರು ಮುಂಚೂಣಿಯಲ್ಲಿದ್ದರು. ರಥಯಾತ್ರೆಯನ್ನು ಕೈಗೊಳ್ಳುವ ಮೂಲಕ ಅಡ್ವಾಣಿ ಅವರು ಬಂಧನಕ್ಕೂ ಒಳಗಾಗಿದ್ದರು. ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

ಭಾರತ ಸರಕಾರದಲ್ಲಿ ಗೃಹ ಸಚಿವರಾಗಿ, ಉಪಪ್ರಧಾನಿ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ಹೆಗಲಿಗೆ ಹೆಗಲು ಕೊಟ್ಟಿರುವ ಎಲ್‌ಕೆ ಅಡ್ವಾಣಿ ಅವರಿಗೆ ರಾಜಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನಿಸಲಾಗಿತ್ತು.