ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆಯನ್ನು ವಿಶಿಷ್ಠವಾಗಿ ಆಚರಿಸಲು ಈ ಬಾರಿ ಬಿಜೆಪಿ ಮುಂದಾಗಿದೆ. ಸೆಪ್ಟೆಂಬರ್ 17ರಂದು ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರತೀ ಮನೆಯಲ್ಲಿಯೂ ಆಶೀರ್ವಾದ ದೀಪ ಬೆಳಗಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಕರೆ ನೀಡಿದ್ದಾರೆ.
ಸೆಪ್ಟೆಂಬರ್ 17ರಂದು ಸಂಜೆ 6ರಿಂದ 7 ಗಂಟೆಯವರೆಗೆ ಭಾರತದ ಪ್ರತೀ ಮನೆಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸಿ, ಮೋದಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯ ವೃದ್ದಿಗಾಗಿ ಪ್ರಾರ್ಥಿಸುವಂತೆ ಅವರು ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಜನಸೇವೆ, ಮಹಿಳಾ ಸಬಲೀಕರಣ ಹಾಗೂ ವಿಕಸಿತ ಭಾರತ 2047ನ್ನು ಶ್ಲಾಘಿಸಿ ಅವರು ದೀಪ ಬೆಳಗುವಂತೆ ಭಾರತೀಯರಲ್ಲಿ ಮನವಿ ಮಾಡಿದ್ದಾರೆ.
ರಾಷ್ಟ್ರ ಸೇವೆಗಾಗಿ ಜನಸೇವೆ ಅನ್ನೋದು ಪ್ರಧಾನಿ ನರೇಂದ್ರ ಮೋದಿ ಅವರ ಮೂಲಮಂತ್ರ. ದೇಶ ಸೇವೆಗಾಗಿಯೇ ಮೋದಿ ಅವರನ್ನು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. 25 ವರ್ಷಗಳ ಸುದೀರ್ಘ ರಾಜಕೀಯ ಪಯಣ ಅಭೂತಪೂರ್ವವಾಗಿದ್ದು, ಮೋದಿ ಅವರು ದೇಶವನ್ನು ಸಮರ್ಥವಾಗಿ ಮುನ್ನೆಡೆಸಿದ್ದಾರೆ. ಸವಾಲುಗಳನ್ನು ಮೆಟ್ಟಿನಿಂತು ಭಾರತವನ್ನು ವಿಶ್ವದಾದ್ಯಂತ ಮನ್ನಣೆ ದೊರೆಯುವಂತೆ ಮಾಡಿಸಿದ್ದಾರೆ.
ಮಹಿಳಾ ಸಬಲೀಕರಣ, ನಕ್ಸಲ್ ನಿರ್ಮೂಲನೆಯ ಜೊತೆಗೆ ಕೇಂದ್ರ ಸರಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅಪಾರವಾದುದು. ಇಂತಹ ಜನನಾಯಕನಾಗಿಯೇ ಪ್ರತೀ ಮನೆಯಲ್ಲಿಯೂ ಆಶೀರ್ವಾದದ ದೀಪ ಬೆಳಗಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.