ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಪ್ರಕರಣದಲ್ಲಿ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆ ಕುರಿತು ಹಲವು ಪ್ರಶ್ನೆಗಳು ಎದ್ದಿದ್ದವು.
ನವದೆಹಲಿ: ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣವನ್ನು ಮರುತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶಿಸಿ ಮೂರು ತಿಂಗಳ ಗಡುವು ನೀಡಿದೆ.
14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಪ್ರಕರಣದಲ್ಲಿ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆ ಕುರಿತು ಹಲವು ಪ್ರಶ್ನೆಗಳು ಎದ್ದಿದ್ದವು. ಪ್ರಕರಣದ ತನಿಖೆಯನ್ನು ಮತ್ತೊಮ್ಮೆ ನಡೆಸಬೇಕು ಎಂಬ ಬೇಡಿಕೆ ಕೂಡ ಕೇಳಿಬಂದಿತ್ತು.
ಇದೀಗ ಸುಪ್ರೀಂ ಕೋರ್ಟ್ ಪ್ರಕರಣದ ಮರುತನಿಖೆಗೆ ಆದೇಶಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ. ಮರುತನಿಖೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಅಂಶಗಳು, ಈ ಹಿಂದೆ ನಡೆದ ತನಿಖೆ ಹಾಗೂ ಲಭ್ಯವಿರುವ ಸಾಕ್ಷ್ಯಗಳನ್ನು ಮತ್ತೊಮ್ಮೆ ಪರಿಶೀಲಿಸುವ ಸಾಧ್ಯತೆ ಇದೆ.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ನ ಈ ಆದೇಶದಿಂದ ಪ್ರಕರಣ ಮತ್ತೆ ಹೊಸ ಹಂತಕ್ಕೆ ಪ್ರವೇಶಿಸಿದೆ.
ಮರುತನಿಖೆ ಯಾವ ತನಿಖಾ ಸಂಸ್ಥೆಯಿಂದ ನಡೆಯಲಿದೆ, ತನಿಖೆಯ ವ್ಯಾಪ್ತಿ ಏನು ಮತ್ತು ಮುಂದಿನ ಕಾನೂನು ಪ್ರಕ್ರಿಯೆ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.
Topics
ಸಂಬಂಧಿತ ಸುದ್ದಿಗಳು
india
ಯೂಟ್ಯೂಬರ್ ಮಧುಮಿತಾ ನಾಪತ್ತೆ : ಕಳವಾಗಿದ್ದ 1 ಕೋಟಿ ಮೌಲ್ಯದ ಚಿನ್ನಾಭರಣ ವಶ, ಕಳತನಕ್ಕೆ ಬಿಗ್ಟ್ವಿಸ್ಟ್
india
Koel Mallick : ಟಿಎಂಸಿ (TMC) ತೊರೆದ 2 ತಿಂಗಳಲ್ಲೇ ಪಶ್ಚಿಮ ಬಂಗಾಳದಿಂದ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೋಯಲ್ ಮಲ್ಲಿಕ್ : ಯಾರು ಈಕೆ ?
india
ಗ್ರಾಹಕರಿಗೆ ಬಿಗ್ ಶಾಕ್ : ಸಾಲದ ಬಡ್ಡಿ ದರ ಶೇ.0.25ರಷ್ಟು ಏರಿಕೆ ಸಾಧ್ಯತೆ!
india

