ಬಿಪಿಎಲ್ ಕಾರ್ಡ್ದಾರರ ಗಮನಕ್ಕೆ: ಎರಡು ದಿನದಲ್ಲಿ ಈ ಕೆಲಸ ಮಾಡದಿದ್ರೆ ನಿಮ್ಮ ರೇಷನ್ ಕಾರ್ಡ್ ರದ್ದು!
ರಾಜ್ಯದ ಕೋಟ್ಯಂತರ ಪಡಿತರ ಚೀಟಿದಾರರಿಗೆ ಸರ್ಕಾರ ಮಹತ್ವದ ಎಚ್ಚರಿಕೆ ನೀಡಿದೆ. ಇನ್ನೂ ಕೆಲವೇ ದಿನಗಳಲ್ಲಿ ನಿಮ್ಮ ಪಡಿತರ ಚೀಟಿಯ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ,
By ಅನಿಲ್ ಗುಂಡ್ಮಿ | Anil Gundmi
2 min read
ರಾಜ್ಯದ ಕೋಟ್ಯಂತರ ಪಡಿತರ ಚೀಟಿದಾರರಿಗೆ ಸರ್ಕಾರ ಮಹತ್ವದ ಎಚ್ಚರಿಕೆ ನೀಡಿದೆ. ಇನ್ನೂ ಕೆಲವೇ ದಿನಗಳಲ್ಲಿ ನಿಮ್ಮ ಪಡಿತರ ಚೀಟಿಯ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ರೇಷನ್ ಪಡೆಯುವಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ಪಡೆಯುತ್ತಿರುವ ಬಿಪಿಲ್ (BPL) ಮತ್ತು ಮತ್ತು ಅಂತ್ಯೋದಯ (AAY) ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಇ-ಕೆವೈಸಿ ಮಾಡಿಸಿ ಐದು ವರ್ಷ ಪೂರ್ಣಗೊಂಡಿರುವವರು ಮತ್ತೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿದೆ.
ಇ-ಕೆವೈಸಿ ಪೂರ್ಣಗೊಳಿಸಲು ಸರ್ಕಾರ ಈ ಹಿಂದೆ ಸೆಪ್ಟೆಂಬರ್ 30ರವರೆಗೆ ಗಡುವು ನೀಡಿತ್ತು. ಆದರೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ, ಇದೀಗ ಸರ್ಕಾರ ಮತ್ತೊಂದು ಅವಕಾಶ ನೀಡಿದೆ.
ಅಕ್ಟೋಬರ್ 20ರವರೆಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಕಾಲಾವಕಾಶ ವಿಸ್ತರಿಸಲಾಗಿದೆ. ಆದರೆ ಈ ಗಡುವು ಮುಗಿಯಲು ಇನ್ನು ಎರಡೇ ದಿನಗಳು ಬಾಕಿ ಉಳಿದಿದ್ದು, ಇದುವರೆಗೆ ಇ-ಕೆವೈಸಿ ಮಾಡಿಸಿಕೊಳ್ಳದವರು ತಕ್ಷಣವೇ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಆಹಾರ ಇಲಾಖೆ ಮನವಿ ಮಾಡಿದೆ.
ನಿಗದಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಏನಾಗುತ್ತದೆ?:
ನಿಗದಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಅಂತಹ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ಸೇರಿದಂತೆ ಪಡಿತರ ಸೌಲಭ್ಯ ಪಡೆಯುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಕೊನೆಯ ದಿನಾಂಕದವರೆಗೆ ಕಾಯದೆ ಇ-ಕೆವೈಸಿ ಮಾಡಿಸಿಕೊಳ್ಳುವುದು ಉತ್ತಮ.
ಇ-ಕೆವೈಸಿ ಮಾಡಿಸಿಕೊಳ್ಳುವ ವಿಧಾನ:
ಇ-ಕೆವೈಸಿ ಮಾಡಿಸಿಕೊಳ್ಳುವ ವಿಧಾನವನ್ನು ನೋಡೋದಾದ್ರೆ ಪಡಿತರ ಚೀಟಿದಾರರು ತಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಆಧಾರ್ ವಿವರಗಳೊಂದಿಗೆ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಬಹುದು. ಅಲ್ಲಿ ಬೆರಳಚ್ಚು ಅಥವಾ ಅಗತ್ಯ ಪರಿಶೀಲನೆಯ ಮೂಲಕ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
ಇನ್ನು ನ್ಯಾಯಬೆಲೆ ಅಂಗಡಿಗೆ ತೆರಳಲು ಸಾಧ್ಯವಾಗದವರಿಗೆ ಸರ್ಕಾರ ಮತ್ತೊಂದು ಸರಳ ಅವಕಾಶವನ್ನು ನೀಡಿದೆ. ನಿಮ್ಮ ಮೊಬೈಲ್ನ ಗೂಗಲ್ ಪ್ಲೇ ಸ್ಟೋರ್ನಿಂದ ‘ಅನ್ನಸೇವಾ’ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಮನೆಯಲ್ಲಿಯೇ ಪಡಿತರ ಚೀಟಿಯ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿ ಇರುವ ಪಡಿತರ ಚೀಟಿದಾರರ ಪಟ್ಟಿಯನ್ನು ಈಗಾಗಲೇ ಆಯಾ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ತಲುಪಿಸಲಾಗಿದೆ. ಸಾರ್ವಜನಿಕರು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು.
ವಿಶೇಷವಾಗಿ ಕಳೆದ ಕೆಲವು ವರ್ಷಗಳಿಂದ ತಮ್ಮ ಸ್ವಂತ ಊರು ಬಿಟ್ಟು ಬೇರೆ ಜಿಲ್ಲೆಗಳಿಗೆ ಅಥವಾ ನಗರ ಪ್ರದೇಶಗಳಿಗೆ ವಲಸೆ ಹೋಗಿರುವ ಪಡಿತರ ಚೀಟಿದಾರರು ತಮ್ಮ ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ.
ಹೀಗಾಗಿ, ನಿಮ್ಮ ರೇಷನ್ ಕಾರ್ಡ್ ಸುರಕ್ಷಿತವಾಗಿರಬೇಕು, ಸರ್ಕಾರದ ಉಚಿತ ಪಡಿತರ ಸೌಲಭ್ಯ ಮುಂದುವರಿಯಬೇಕು ಎಂದರೆ ಇ-ಕೆವೈಸಿ ಪ್ರಕ್ರಿಯೆಯನ್ನು ತಪ್ಪದೇ ಪೂರ್ಣಗೊಳಿಸಿ. ಹೀಗಾಗಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಫಲಾನುಭವಿಗಳು ಕೊನೆಯ ದಿನಾಂಕದವರೆಗೆ ಕಾಯದೆ ತಕ್ಷಣವೇ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಿ.
ನಿಮ್ಮ ಒಂದು ಸಣ್ಣ ನಿರ್ಲಕ್ಷ್ಯದಿಂದ ಮುಂದಿನ ದಿನಗಳಲ್ಲಿ ಉಚಿತ ಪಡಿತರ ಸೌಲಭ್ಯದಲ್ಲಿ ತೊಂದರೆ ಉಂಟಾಗದಂತೆ ಎಚ್ಚರ ವಹಿಸಿ. ಕೊನೆಯ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ, ಇಂದೇ ನಿಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಅಥವಾ ಅನ್ನಸೇವಾ ಆ್ಯಪ್ ಮೂಲಕ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಿ.
Topics
ಸಂಬಂಧಿತ ಸುದ್ದಿಗಳು
karnataka
ನವರಾತ್ರಿಯ ಹೊತ್ತಲ್ಲೂ ನಿಲ್ಲದ ಮಳೆಯ ಆರ್ಭಟ: ಅಕ್ಟೋಬರ್ 24ರವರೆಗೆ ಸುರಿಯಲಿದೆ ಬಾರೀ ಮಳೆ
karnataka
ದೊಡ್ಲ ಪುಲ್ ಕ್ರೀಮ್ ಹಾಲಿನಲ್ಲಿ ಕಾಸ್ಟಿಕ್ ಸೋಡಾ, ಡಿಟರ್ಜೆಂಟ್ ಪತ್ತೆ : ಕಾನೂನು ಕ್ರಮಕ್ಕೆ FSSAI ಸೂಚನೆ
karnataka
ಗ್ರಾಮ ಪಂಚಾಯತ್ಗಳಿಗೆ ಸದ್ಯಕ್ಕಿಲ್ಲ ಚುನಾವಣೆ : ಆಡಳಿತಾಧಿಕಾರಿಗಳ ಅವಧಿ 6 ತಿಂಗಳು ವಿಸ್ತರಣೆ
karnataka

