News Next Kannada

karnataka

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ : ವಾಲ್ಮೀಕಿ ನಿಗಮ ಹಗರಣದಲ್ಲಿ ತಲೆದಂಡ

ನನ್ನ ಮೇಲಿನ ಯಾವುದೇ ಆರೋಪಗಳು ಕೂಡ ಸಾಬೀತಾಗಿಲ್ಲ. ತನಿಖೆಯಿಂದ ಸತ್ಯ ಹೊರಬಲಿದೆ. ನಾನು ನಿರಪರಾಧಿಯಾಗಿಯೇ ಹೊರ ಬರುತ್ತೇನೆ ಎಂಬ ವಿಶ್ವಾಸವಿದೆ.

By Arun Gundmi | ಅರುಣ್‌ ಗುಂಡ್ಮಿ Editor-in-Chief
B Nagendra Resigns Minister Post Valmiki Corporation Scam Karnataka

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಕೊನೆಗೂ ರಾಜೀನಾಮೆ ಸಲ್ಲಿಸಿದ್ದಾರೆ.

ನನ್ನ ಮೇಲಿನ ಯಾವುದೇ ಆರೋಪಗಳು ಕೂಡ ಸಾಬೀತಾಗಿಲ್ಲ. ತನಿಖೆಯಿಂದ ಸತ್ಯ ಹೊರಬಲಿದೆ. ನಾನು ನಿರಪರಾಧಿಯಾಗಿಯೇ ಹೊರ ಬರುತ್ತೇನೆ ಎಂಬ ವಿಶ್ವಾಸವಿದೆ. ಆದರೆ ರಾಜ್ಯ ಸರಕಾರಕ್ಕೆ ಮುಜುಗರ ಆಗಬಾರದು ಅನ್ನೋ ಖಾರಣಕ್ಕೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿ. ನಾಗೇಂದ್ರ ಹೇಳಿಕೆ ನೀಡಿದ್ದಾರೆ.

ವಾಲ್ಮೀಕಿ ನಿಗಮದ ಲೆಕ್ಕಾಧಿಕ್ಷಕರಾಗಿದ್ದ ಚಂದ್ರಶೇಖರನ್‌ ಅವರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಈ ಹಗರಣ ಬೆಳಕಿಗೆ ಬಂದಿತ್ತು. ಚಂದ್ರಶೇಖರನ್‌ ಅವರು ಡೆತ್‌ನೋಟ್‌ನಲ್ಲಿ ಸುಮಾರು 80 ಕೋಟಿಗೂ ಅಧಿಕ ಹಣವನ್ನು ನಕಲಿ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇದರಲ್ಲಿ ಸಚಿವರ ಮೌಖಿಕ ಆದೇಶವಿತ್ತು ಅನ್ನೋ ಅಂಶವನ್ನು ಉಲ್ಲೇಖಿಸಿದ್ದರು.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಕೂಟ ಸಚಿವರ ರಾಜೀನಾಮೆ ಆಗ್ರಹಿಸಿ, ರಾಜ್ಯದಾದ್ಯಂತ ಪ್ರತಿಭಟನೆಗೆ ಮುಂದಾಗಿತ್ತು. ವಿಧಾನಸಭಾ ಕಲಾದಲ್ಲಿ ಧರಣಿಯನ್ನು ನಡೆಸಿದ್ದು ಮಾತ್ರವಲ್ಲದೇ ರಾಜ್ಯಪಾಲರ ಮೇಲೆಯೂ ಒತ್ತಡವನ್ನು ಹೇರಿತ್ತು.

ಸದ್ಯ ರಾಜ್ಯ ಸರಕಾರ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಮಾತ್ರವಲ್ಲದೇ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ನೀಡಿದ ದೂರಿನ ಅನ್ವಯ ಸಿಬಿಐ ಮತ್ತು ಇಡಿ ಸಂಸ್ಥೆಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದವು.

ಬಿಜೆಪಿ ಹಾಗೂ ಜೆಡಿಎಸ್‌ ಸೆಪ್ಟೆಂಬರ್‌ 1ರಿಂದ ಕೈಗೊಳ್ಳಲಿರುವ ಬಳ್ಳಾರಿ ಪಾದಯಾತ್ರೆಗೂ ಮೊದಲೇ ಸಚಿವ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್‌ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಸಚಿವರ ಮೊದಲ ತಲೆದಂಡ ಇದಾಗಿದೆ.