ಬಂಗಾಳಕೊಲ್ಲಿ ಎಫೆಕ್ಟ್: ರಾಜ್ಯದ ಕರಾವಳಿ, ಮಲೆನಾಡಿನಲ್ಲಿ 10 ದಿನ ಜಲಪ್ರಳಯದ ಭೀತಿ
ಕರ್ನಾಟಕ ರಾಜ್ಯದಾದ್ಯಂತ ಮುಂಬರುವ ಹತ್ತು ದಿನಗಳ ಕಾಲ ನಿರಂತರವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
By Meghana Pranuth | ಮೇಘನಾ ಪ್ರಣೂತ್
1 min read
ಬಂಗಾಳಕೊಲ್ಲಿಯ ಬಾಂಗ್ಲಾದೇಶದ ಕರಾವಳಿ ತೀರದಲ್ಲಿ ಸೃಷ್ಟಿಯಾಗಿರುವ ವಾತಾವರಣದ ಸುಳಿಗಾಳಿಯ ಪರಿಣಾಮದಿಂದಾಗಿ, ಕರ್ನಾಟಕ ರಾಜ್ಯದಾದ್ಯಂತ ಮುಂಬರುವ ಹತ್ತು ದಿನಗಳ ಕಾಲ ನಿರಂತರವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮಳೆಯ ತೀವ್ರತೆ ವಿಪರೀತವಾಗಿರದಿದ್ದರೂ, ರಾಜ್ಯದ ಪ್ರಮುಖ ವಲಯಗಳಲ್ಲಿ ಮುಂಗಾರು ಮಳೆಯ ಸರಣಿಯು ಬಿಡುವಿಲ್ಲದೆ ಮುಂದುವರಿಯಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಭಾಗಗಳಲ್ಲಿ ಬಿಸಿಲು ಮತ್ತು ಮೋಡ ಕವಿದ ವಾತಾವರಣದ ನಡುವೆಯೇ ದಿನದಲ್ಲಿ ಮೂರ್ನಾಲ್ಕು ಬಾರಿ ಮಳೆ ಸುರಿಯಲಿದೆ. ಅದರಲ್ಲೂ ಘಟ್ಟ ಪ್ರದೇಶದ ತಳಭಾಗ ಹಾಗೂ ಸುಳ್ಯ ಪರಿಸರದಲ್ಲಿ ಮಧ್ಯಾಹ್ನದ ನಂತರ ವರುಣನ ಅಬ್ಬರ ಕೊಂಚ ಹೆಚ್ಚಿರಲಿದೆ.
ಇನ್ನೊಂದೆಡೆ, ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇಳಿಕೆಯಾಗಿದ್ದರೂ ಸಹ, ದಿನವಿಡೀ ಹನಿ ಹನಿಯಾಗಿ ಸುರಿಯುವ ತುಂತುರು ಮಳೆಗೆ ಯಾವುದೇ ಬಿಡುವು ಸಿಗುವುದಿಲ್ಲ.
ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಮತ್ತು ಬಳ್ಳಾರಿ ಭಾಗಗಳಲ್ಲಿ ಸದ್ಯಕ್ಕೆ ಮಳೆ ಕಡಿಮೆಯಾಗಿದ್ದರೂ, ಆಗಸ್ಟ್ 18ರಿಂದ ಇಲ್ಲಿ ಮತ್ತೆ ಮುಂಗಾರು ಚುರುಕಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ದಾವಣಗೆರೆ, ವಿಜಯನಗರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಹಲವೆಡೆ ಗುಡುಗು ಮತ್ತು ಮಿಂಚಿನ ಸಹಿತ ಸಾಧಾರಣ ಮಳೆಯಾಗುವ ಲಕ್ಷಣಗಳು ಸ್ಪಷ್ಟವಾಗಿವೆ.
ಒಟ್ಟಾರೆಯಾಗಿ, ಈ ಹತ್ತು ದಿನಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿಗೆ ಹೊಂದಿಕೊಂಡಿರುವ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಸೂಕ್ತವಾಗಿದೆ.
Topics
ಸಂಬಂಧಿತ ಸುದ್ದಿಗಳು
karnataka
Weather Report : ಇಂದು ಗುಡುಗು ಸಹಿತ ಭಾರಿ ಮಳೆ ಭೀತಿ, ಕರಾವಳಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
karnataka
Half Helmet Ban : ಬೈಕ್ ಸವಾರರೇ ಎಚ್ಚರ: ಹಾಫ್ ಹೆಲ್ಮೆಟ್ಗಳಿಗೆ ಬ್ರೇಕ್, ರೂಲ್ಸ್ ಬ್ರೇಕ್ ಮಾಡಿದರೆ ಲೈಸೆನ್ಸ್ ರದ್ದು
karnataka
ಈ 14 ಜಿಲ್ಲೆಗಳಲ್ಲಿ ಹಸ್ತಾಮಳೆ ಅಬ್ಬರ..! ಕರ್ನಾಟಕದಲ್ಲಿ ಬಿರುಗಾಳಿ ಸಹಿತ ಮಳೆ : ಹವಾಮಾನ ಇಲಾಖೆ ಅಲರ್ಟ್
karnataka

