ಒಂದೆಡೆ ಮಳೆಯ ಕೊರತೆ, ಮತ್ತೊಂದೆಡೆ ಒಣಹವೆ : ಸಿಲಿಕಾನ್ ಸಿಟಿ ಬೆಂಗಳೂರಿನ ತಾಪಮಾನದಲ್ಲಿ ಬಾರೀ ಏರಿಕೆ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ 33.9 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ದಾಖಲಾಗಿದ್ದು, ಸಾಮಾನ್ಯಕ್ಕಿಂತ 5.7 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗಿದೆ.
By Arun Gundmi | ಅರುಣ್ ಗುಂಡ್ಮಿ · Editor-in-Chief
1 min read
ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆ ಎದುರಾಗಿದ್ದು, ತಾಪಮಾನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಕರ್ನಾಟಕ ರಾಜ್ಯದಾದ್ಯಂತ ಸಾಮಾನ್ಯ ತಾಪಮಾನಕ್ಕಿಂತ ಕನಿಷ್ಠ 3 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನದಲ್ಲಿ ಏರಿಕೆ ಕಂಡಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿಯೂ ತಾಪಮಾನ ಏರಿಕೆಯಾಗುತ್ತಿದ್ದು, ಮುಂದಿನ ಐದು ದಿನಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ 33.9 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ದಾಖಲಾಗಿದ್ದು, ಸಾಮಾನ್ಯಕ್ಕಿಂತ 5.7 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗಿದೆ. ಅಲ್ಲದೇ ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿಯೂ ತಾಪಮಾನದಲ್ಲಿ ಏರಿಕೆಯಾಗಿದ್ದು, 32.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿದ್ರೆ, ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 32.1 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ.
ಸಾಮಾನ್ಯವಾಗಿ ಮಧ್ಯಾಹ್ನದ ಬಳಿಕ ತಾಪಮಾನದಲ್ಲಿ ಕೊಂಚ ಇಳಿಕೆ ಕಂಡು ಬರುತ್ತಿದ್ದು, ಸಮಝೆಯ ವೇಳೆಗೆ ನಗರದಲ್ಲಿ 30.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಕಳೆದ ಎರಡು ವಾರಗಳಿಂದಲೂ ಬೆಂಗಳೂರಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದೇ ತಾಪಮಾನ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಮಣ್ಣಿನಲ್ಲಿ ತೇವಾಂಶದ ಪ್ರಮಾಣ ಇಳಿಕೆಯಾಗಿದ್ದು, ಮೋಡಗಳ ಸಂಖ್ಯೆಯೂ ಕಡಿಮೆಯಾಗಿರುವುದರಿಂದ ತಾಪಮಾನ ಏರಿಕೆಯಾಗಿದೆ ಎನ್ನಲಾಗುತ್ತಾರೆ ಹವಾಮಾನ ತಜ್ಞರಾಗಿರುವ ಸಿಎಸ್ ಪಾಟೀಲ್.
ತಾಪಮಾನದಲ್ಲಿ ಬಾರೀ ಏರಿಕೆ ಕಂಡು ಬಂದಿದ್ದರೂ ಕೂಡ ಇದು ಹೀಟ್ ವೇವ್ಸ್ ಅಲ್ಲಾ ಅಂತ ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಸೆಪ್ಟೆಂಬರ್ 14ರ ನಂತರ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಕಟೋಬರ್ 16ರ ಬಳಿಕ ಬೆಂಗಳೂರು, ಮೈಸೂರು, ರಾಮನಗರ, ಮಂಡ್ಯ, ಕೊಡಗು, ತುಮಕೂರು, ಹಾಸನ ಸೇರಿದಂತೆ ಹೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Topics
ಸಂಬಂಧಿತ ಸುದ್ದಿಗಳು
karnataka
ಕರ್ನಾಟಕಕ್ಕೆ ಕೈಕೊಟ್ಟ ಮುಂಗಾರು ಮಳೆ : ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಕುಸಿತ
karnataka
ಕೆಪಿಎಸ್ಇ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಸಿಐಡಿ ತನಿಖೆಯಲ್ಲಿ ಬಯಲಾಗ್ತಿದೆ ಸ್ಪೋಟಕ ರಹಸ್ಯ
karnataka
ಗಣೇಶ ಹಬ್ಬಕ್ಕೆ ಮಂಗಳೂರಿಗೆ ರೈಲ್ವೆ ಇಲಾಖೆ ಅನ್ಯಾಯ : ರೈಲ್ವೆ ಇಲಾಖೆ ವಿರುದ್ದ ಮಂಗಳೂರಿಗರ ಆಕ್ರೋಶ
karnataka

