ಕರ್ನಾಟಕಕ್ಕೆ 'ಅರ್ನಬ್' ಚಂಡಮಾರುತದ ಭೀತಿ :ರಾಜ್ಯಾದ್ಯಂತ ಮಳೆ ಹೈ ಅಲರ್ಟ್
ದೇಶದ ಪೂರ್ವ ಕರಾವಳಿಯಲ್ಲಿ ತೀವ್ರ ಆತಂಕ ಮೂಡಿಸಿರುವ ಬಂಗಾಳ ಕೊಲ್ಲಿಯ ಅರ್ನಬ್ ಚಂಡಮಾರುತದ ಎಫೆಕ್ಟ್ ಈಗ ಕರ್ನಾಟಕಕ್ಕೂ ತಟ್ಟಿದೆ.
ದೇಶದ ಪೂರ್ವ ಕರಾವಳಿಯಲ್ಲಿ ತೀವ್ರ ಆತಂಕ ಮೂಡಿಸಿರುವ ಬಂಗಾಳ ಕೊಲ್ಲಿಯ ಅರ್ನಬ್ ಚಂಡಮಾರುತದ ಎಫೆಕ್ಟ್ ಈಗ ಕರ್ನಾಟಕಕ್ಕೂ ತಟ್ಟಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಈ ವಾಯುಭಾರ ಕುಸಿತವು ಒಡಿಶಾ ಕಡೆಗೆ ಸಾಗುತ್ತಿದ್ದರೂ, ಇದರ ಪ್ರಭಾವದಿಂದಾಗಿ ಕರ್ನಾಟಕದಾದ್ಯಂತ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಮುಖ್ಯವಾಗಿ ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಪ್ರದೇಶಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ. ಆರಂಭದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ನಂತರ ನಿರಂತರವಾಗಿ ಸಾಧಾರಣದಿಂದ ಭಾರಿ ಮಳೆ ಆರಂಭವಾಗುವ ನಿರೀಕ್ಷೆಯಿದೆ. ಇನ್ನು ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪರಿಸ್ಥಿತಿ ಗಂಭೀರವಾಗಿರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಸರ್ಕಾರವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ನದಿ ಜಲಾನಯನ ಪ್ರದೇಶ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಅತ್ಯಂತ ಜಾಗರೂಕರಾಗಿರಲು ಸೂಚಿಸಲಾಗಿದೆ. ಭಾರಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬೃಹತ್ ಹೊರ್ಡಿಂಗ್ಸ್ ಮತ್ತು ಒಣಗಿದ ಮರಗಳ ಕೆಳಗೆ ನಿಲ್ಲಬಾರದು ಎಂದು ಎಚ್ಚರಿಸಲಾಗಿದೆ. ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಲಿರುವ ಕಾರಣ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ತಾಕೀತು ಮಾಡಲಾಗಿದೆ. ಜನರು ಸುರಕ್ಷಿತ ಸ್ಥಳಗಳಲ್ಲೇ ಉಳಿದುಕೊಳ್ಳಲು ಆಡಳಿತ ಮಂಡಳಿ ವಿನಂತಿಸಿದೆ.
Topics
ಸಂಬಂಧಿತ ಸುದ್ದಿಗಳು
karnataka
ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್ : 110 ಪ್ರಮುಖ ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆ
karnataka
ಕರಾವಳಿಯಲ್ಲಿ ಒಣಹವೆ : 5 ಜಿಲ್ಲೆಗಳಲ್ಲಿ ಬಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
karnataka
ಕರ್ನಾಟಕದಲ್ಲಿ ಪಂಚಾಯತ್ ಚುನಾವಣಾ ಕಹಳೆ : ಈ ಬಾರಿ ಮಹಿಳೆಯರದ್ದೇ ಕಾರುಬಾರು
karnataka

