ಸೈಕ್ಲೋನ್ ಎಫೆಕ್ಟ್, ಕರಾವಳಿ-ಮಲೆನಾಡಲ್ಲಿ ವರುಣಾಘಾತ : ಮುಂದಿನ 4 ದಿನಗಳ ಕಾಲ ಬಾರೀ ಮಳೆ ಎಚ್ಚರಿಕೆ
ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಹಾಸನ, ಕೊಡಗು, ಚಿಕ್ಕಮಗಳೂರು, ತುಮಕೂರು ಮತ್ತು ಚಿತ್ರದುರ್ಗ ಸೇರಿದಂತೆ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಅವಧಿ ಮುಗಿದಿದ್ದರೂ, ಹಿಂಗಾರು ಮಳೆಯು ವಾಯುಭಾರ ಕುಸಿತ ಮತ್ತು ಸೈಕ್ಲೋನ್ ಸುಳಿಗಾಳಿಯ ಪ್ರಭಾವದಿಂದಾಗಿ ತೀವ್ರಗೊಂಡಿದೆ.
ಭಾರತೀಯ ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆಯ ಪ್ರಕಾರ, ಇಂದಿನಿಂದ ಅಕ್ಟೋಬರ್ 24ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗುವ ಸಾಧ್ಯತೆಯಿದೆ.
ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಹೆಚ್ಚಿರಲಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಬೀಸಲಿದೆ.
ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಹಾಸನ, ಕೊಡಗು, ಚಿಕ್ಕಮಗಳೂರು, ತುಮಕೂರು ಮತ್ತು ಚಿತ್ರದುರ್ಗ ಸೇರಿದಂತೆ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಜೋರಾದ ಗಾಳಿ ಬೀಸುವ ಸಾಧ್ಯತೆಯಿದೆ.
ಇತ್ತ ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಮುಂಗಾರು ಮಾದರಿಯ ವಾತಾವರಣ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ನಗರದಾದ್ಯಂತ ವ್ಯಾಪಕ ಮಳೆಯಾಗಿದ್ದು, ಮುಂದಿನ ಐದು ದಿನಗಳ ಕಾಲ ಮೋಡಕವಿದ ಆಕಾಶದೊಂದಿಗೆ ಗುಡುಗು-ಮಿಂಚಿನ ಆರ್ಭಟ ತೀವ್ರಗೊಳ್ಳಲಿದೆ.
ಪ್ರಮುಖವಾಗಿ ಅಕ್ಟೋಬರ್ 20 ಮತ್ತು 21ರಂದು ಬೆಂಗಳೂರಿನಲ್ಲಿ ಅತಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಮೈಸೂರು, ಕೋಲಾರ, ಮಂಡ್ಯ, ಶಿವಮೊಗ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ರಾಜ್ಯದ ದಕ್ಷಿಣ ಮತ್ತು ಕರಾವಳಿ ಭಾಗದಲ್ಲಿ ಜಲಾವೃತ ಭೀತಿ ಇದ್ದರೆ, ಮತ್ತೊಂದೆಡೆ ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಮಳೆಯಿಲ್ಲದೆ ಸಂಪೂರ್ಣ ಒಣ ಹವಾಮಾನ ಇರಲಿದೆ ಎಂದು ವರದಿ ತಿಳಿಸಿದೆ.
ಅಕ್ಟೋಬರ್ 22ರ ನಂತರ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಹಂತ-ಹಂತವಾಗಿ ಕ್ಷೀಣಿಸುವ ಸಾಧ್ಯತೆಯಿದೆ.
Topics
ಸಂಬಂಧಿತ ಸುದ್ದಿಗಳು
karnataka
Mysuru Dasara : ಮೈಸೂರು ದಸರಾದಲ್ಲಿ ರೀಲ್ಸ್ ಸ್ಪರ್ಧೆ : 100 ಬೆಸ್ಟ್ ರೀಲ್ಸ್ಗಳಿಗೆ ಸಿಗಲಿದೆ ಬಹುಮಾನ
karnataka
ರೇಷನ್ ಕಾರ್ಡ್ ಬಳಕೆದಾರರೇ ಗಮನಿಸಿ : ಪಡಿತರ ಚೀಟಿ ಇಕೆವೈಸಿ ಗಡುವು ನವೆಂಬರ್ 10ಕ್ಕೆ ವಿಸ್ತರಣೆ
karnataka
ಕರ್ನಾಟಕದ 9 ಜಿಲ್ಲೆಗಳಿಗೆ ಮುಂದಿನ 6 ದಿನ ಭಾರಿ ಮಳೆ ಎಚ್ಚರಿಕೆ
karnataka

