ದಸರಾ ರಜೆ ಕರಾವಳಿಯತ್ತ ಪ್ರವಾಸಿಗರ ದಂಡು : ಕರಾವಳಿಯ ಪ್ರವಾಸೋದ್ಯಮಕ್ಕೀಗ ಜೀವ ಕಳೆ

ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ವಾಟರ್‌ ಸ್ಪೋರ್ಟ್‌ ಹಾಗೂ ಸೈಂಟ್‌ ಮೇರೀಸ್‌ ದ್ವೀಪಕ್ಕೆ ಬೋಟ್‌ ಸೇವೆ ಪುನರಾರಂಭಗೊಂಡಿದೆ.

By Arun Gundmi | ಅರುಣ್‌ ಗುಂಡ್ಮಿ · Editor-in-Chief

1 min read

WhatsAppPost
dakshina kannada tourism boost dasara holidays
dakshina kannada tourism boost dasara holidays

ಉಡುಪಿ : ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ ಆದ ಬೆನ್ನಲ್ಲೇ ಕರಾವಳಿ ಜಿಲ್ಲೆಗಳತ್ತ ಪ್ರವಾಸಿಗರು ಮುಖಮಾಡುತ್ತಿದ್ದಾರೆ. ಅದ್ರಲ್ಲೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಉಡುಪಿಯ ಮಲ್ಪೆ, ಮಂಗಳೂರಿನ ಪಣಂಬೂರು ಬೀಚ್‌ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ.

ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ವಾಟರ್‌ ಸ್ಪೋರ್ಟ್‌ ಹಾಗೂ ಸೈಂಟ್‌ ಮೇರೀಸ್‌ ದ್ವೀಪಕ್ಕೆ ಬೋಟ್‌ ಸೇವೆ ಪುನರಾರಂಭಗೊಂಡಿದೆ. ಕೋಡಿ ಬೀಚ್‌, ಮರವಂತೆ, ಕಾಪು ಬೀಚ್‌ಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಕಳೆದ ವರ್ಷ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಬರೋಬ್ಬರಿ 6 ಕೋಟಿ ಗೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದರು. ಕಳೆದ ಮೂರು ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಈ ಬಾರಿ ಪ್ರವಾಸಿಗರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ ಕಂಡಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮಾತ್ರವಲ್ಲ, ಧಾರ್ಮಿಕ ಪ್ರವಾಸೋದ್ಯಮಕ್ಕೂ ಕೂಡ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಕರಾವಳಿಯ ಪ್ರಮುಖ ಪುಣ್ಯಕ್ಷೇತ್ರಗಳಾಗಿರುವ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮಂಜುನಾಥೇಶ್ವರ, ಕೊಲ್ಲೂರು ಮೂಕಾಂಬಿಕೆ, ಕಟೀಲು ದುರ್ಗಾಪರಮೇಶ್ವರಿ, ಮಂಗಳಾದೇವಿ, ಬಪ್ಪನಾಡು ದುರ್ಗಾಪರಮೇಶ್ವರಿ, ಪೊಳಲಿಯ ರಾಜರಾಜೇಶ್ವರಿ, ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರ ಸೇರಿದಂತೆ ಎರಡೂ ಜಿಲ್ಲೆಯಲ್ಲಿರುವ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ.

Topics

ಸಂಬಂಧಿತ ಸುದ್ದಿಗಳು