Kannada News Next

karnataka

ದಸರಾ ವೇಳೆಯಲ್ಲೂ ಆರ್ಭಟಿಸುತ್ತಾ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದಲೂ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ 4 ಸೆಂಟಿ ಮೀಟರ್‌ ಮಳೆ ಸುರಿದಿದೆ.

By Arun Gundmi | ಅರುಣ್‌ ಗುಂಡ್ಮಿ Editor-in-Chief
dasara rain alert karnataka weather forecast

ಬೆಂಗಳೂರು : ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅಕ್ಟೋಬರ್‌ 3 ಮತ್ತು 4 ರಂದು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಬಾರೀ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದಲೂ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ 4 ಸೆಂಟಿ ಮೀಟರ್‌ ಮಳೆ ಸುರಿದಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಅಲ್ಲದೇ ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ವಿಜಯಪುರ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗಲಿದೆ.

ಆದರೆ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಬೀದರ್‌, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿಯೂ ಮಳೆ ಇರಲಿದೆ.

ಇಂದು ಮಾತ್ರವಲ್ಲದೇ ನಾಳೆ ಕೂಡ ಮಳೆ ಮುಂದುವರಿಯಲಿದೆ. ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ 4 ಸೆಂಟಿ ಮೀಟರ್‌ ಮಳೆಯಾಗಿದ್ರೆ, ಭಾಗಮಂಡಲ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ತಲಾ 3 ಸೆಂಟಿ ಮೀಟರ್‌ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನೂ 10 ದಿನಗಳ ಕಾಲ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ದಸರಾ ಹೊತ್ತಲ್ಲೂ ಈ ಬಾರಿ ಮಳೆ ಆರ್ಭಟಿಸುವ ಸಾಧ್ಯತೆಯಿದೆ.