ಮತದಾರರ ಕರಡು ಪಟ್ಟಿ ಇಂದು ರಿಲೀಸ್ : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಕೈಬಿಟ್ಟು ಹೋಗಿದ್ಯೇ ? : ಇಲ್ಲಿ ಪರಿಶೀಲಿಸಿ
ಪ್ರತಿಯೊಬ್ಬ ನಾಗರಿಕರು ಲಿಸ್ಟ್‌ನಲ್ಲಿ ತಮ್ಮ ಹೆಸರು, ವಿಳಾಸ ಸೇರಿದಂತೆ ಎಲ್ಲಾ ತಾಂತ್ರಿಕ ವಿವರಗಳು ಸರಿಯಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಚುನಾವಣಾ ಆಯೋಗ ಹೇಳಿದೆ
ಬೆಂಗಳೂರು : ದೇಶಾದ್ಯಂತ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಪ್ರಮುಖ ಹಂತವಾಗಿ ಚುನಾವಣಾ ಆಯೋಗವು ಇಂದಿನಿಂ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಮತದಾನದ ಅರ್ಹತೆ ಹೊಂದಿರುವ ಪ್ರತಿಯೊಬ್ಬ ನಾಗರಿಕರು ಲಿಸ್ಟ್‌ನಲ್ಲಿ ತಮ್ಮ ಹೆಸರು, ವಿಳಾಸ ಸೇರಿದಂತೆ ಎಲ್ಲಾ ತಾಂತ್ರಿಕ ವಿವರಗಳು ಸರಿಯಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಒಂದು ವೇಳೆ ಪ್ರಕಟಿತ ಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟುಹೋಗಿದ್ದರೆ ಅಥವಾ ಹೆಸರು ಮತ್ತು ವಿಳಾಸದಲ್ಲಿ ಯಾವುದೇ ತಪ್ಪುಗಳಿದ್ದರೆ ಸಾರ್ವಜನಿಕರು ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನಾಗರಿಕರು ಆಗಸ್ಟ್ 24 ರಿಂದ ಸೆಪ್ಟೆಂಬರ್ 23, 2026ರ ಒಳಗಾಗಿ ತಮ್ಮ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ದಾಖಲಿಸಬಹುದು.
ಸಾರ್ವಜನಿಕರಿಂದ ಬರುವ ಇಂತಹ ದೂರುಗಳು ಮತ್ತು ಆಕ್ಷೇಪಣೆಗಳ ಪರಿಶೀಲನೆ ಹಾಗೂ ವಿಚಾರಣಾ ಪ್ರಕ್ರಿಯೆಯು ಅಕ್ಟೋಬರ್ 22 ರವರೆಗೆ ಮುಂದುವರಿಯಲಿದೆ. ಮತದಾರರು ಕರಡು ಪಟ್ಟಿಯನ್ನು ವೀಕ್ಷಿಸಲು ಮುಖ್ಯ ಚುನಾವಣಾಧಿಕಾರಿ ಕರ್ನಾಟಕದ ಅಧಿಕೃತ ಜಾಲತಾಣವಾದ www.ceo.karnataka.gov.in ಅಥವಾ ಕೇಂದ್ರ ಚುನಾವಣಾ ಆಯೋಗದ voters.eci.gov.in ಪೋರ್ಟಲ್‌ಗಳಿಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಆನ್‌ಲೈನ್ ವ್ಯವಸ್ಥೆಯ ಅರಿವಿಲ್ಲದವರು ತಮ್ಮ ವ್ಯಾಪ್ತಿಯ ಸ್ಥಳೀಯ ಮತಗಟ್ಟೆ ಅಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ನೆರವು ಹಾಗೂ ಮಾಹಿತಿ ಪಡೆದುಕೊಳ್ಳಬಹುದು. ಸಾರ್ವಜನಿಕರಿಂದ ಸ್ವೀಕೃತವಾಗುವ ಎಲ್ಲಾ ತಿದ್ದುಪಡಿಗಳನ್ನು ಅಳವಡಿಸಿದ ನಂತರ, ಮುಂಬರುವ ನವೆಂಬರ್ 27, 2026 ರಂದು ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಸಾರ್ವಜನಿಕರ ಅವಗಾಹನೆಗೆ ಬಿಡುಗಡೆ ಮಾಡಲಾಗುತ್ತದೆ. ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಪ್ರತಿಯೊಬ್ಬ ಅರ್ಹ ನಾಗರಿಕರು ಇಂದೇ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳುವುದು ಅತ್ಯಗತ್ಯವಾಗಿದೆ.
Topics
ಸಂಬಂಧಿತ ಸುದ್ದಿಗಳು
karnataka
ಕರ್ನಾಟಕದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆ : 40 ಕಿ.ಮೀ ವೇಗದಲ್ಲಿ ಬಿರುಗಾಳಿ, ಹವಾಮಾನ ಇಲಾಖೆ ಮುನ್ಸೂಚನೆ
karnataka
ಚಾರಣ ಸ್ಥಳಗಳಿಗೆ ದಿನಕ್ಕೆ 150 ಜನರಿಗಷ್ಟೇ ಎಂಟ್ರಿ: ನಿಯಮ ಉಲ್ಲಂಘಿಸಿದರೆ ಬ್ಲ್ಯಾಕ್ಲಿಸ್ಟ್ ಸೇರ್ಪಡೆ, ಡ್ರೋನ್ ಕಣ್ಗಾವಲು!
karnataka
ಹಳೇ ಪಿಂಚಣಿ ಪದ್ಧತಿ ಜಾರಿಗೆ ರಾಜ್ಯ ಸರ್ಕಾರ ಗಂಭೀರ ತೀರ್ಮಾನ : ಶೀಘ್ರದಲ್ಲೇ ಹೊರಬೀಳಲಿದೆ ಅಧಿಕೃತ ಆದೇಶ
karnataka

