Kannada News Next

karnataka

ಕರ್ನಾಟಕದಲ್ಲಿ ಅಕ್ಟೋಬರ್‌ 22ರವರೆಗೆ ಬಾರೀ ಮಳೆ ಯೆಲ್ಲೋ ಅಲರ್ಟ್‌ : ಭತ್ತದ ಬೆಳೆಗಾರರಿಗೆ ಆತಂಕ

ಬೆಂಗಳೂರಿನಲ್ಲಿ ರಾತ್ರಿಯ ವೇಳೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ

By Arun Gundmi | ಅರುಣ್‌ ಗುಂಡ್ಮಿ Editor-in-Chief
Karnataka heavy rain yellow alert paddy farmers concern

ಬೆಂಗಳೂರು : ಕರ್ನಾಟಕ ( Karnataka) ದಲ್ಲಿ ಇನ್ನೂ ಒಂದು ವಾರಗಳ ಕಾಲ ಬಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ (IMD) ಮುನ್ಸೂಚನೆಯನ್ನು ನೀಡಿದೆ. ಕರಾವಳಿ, ಬೆಂಗಳೂರು, ದಕ್ಷಿಣ ಒಳನಾಡು ಸೇರಿದಂತೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್‌ 22ರ ವರೆಗೆ ಭಾರೀ ಮಳೆ ( Heavy Rain) ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ( Yellow Alart) ಘೋಷಿಸಿದೆ.

ಬೆಂಗಳೂರಿನಲ್ಲಿ ರಾತ್ರಿಯ ವೇಳೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯ ತೀವ್ರತೆಯಿಂದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು, ಸಾರ್ವಜನಿಕರು ಮತ್ತು ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆಯೂ ಹವಾಮಾನ ಇಲಾಖೆ ಸೂಚಿಸಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ್ಲಿ ಅಕ್ಟೋಬರ್‌ 19ರ ವರೆಗೆ ಬಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಇನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೋಲಾರ, ತುಮಕೂರು, ಚಿಕ್ಕಮಗಳೂರು ಮತ್ತು ಚಾಮರಾಜನಗರದಲ್ಲಿಯೂ ಅಕ್ಟೋಬರ್‌ 22ರವರೆಗೆ ಬಾರೀ ಮಳೆಯಾಗುವ ನಿರೀಕ್ಷೆಯಿದೆ.

ಉಳಿಂದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಎಚ್ಚರಿಕೆಯನ್ನು ರವಾನಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.