ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಪಿ, ರೀಲ್ಸ್‌ಗೆ ಬೀಳಲಿದೆ ಸಂಪೂರ್ಣ ಬ್ರೇಕ್
ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ಸೆಲ್ಪಿ ಹಾಗೂ ವಿಡಿಯೋ, ರೀಲ್ಸ್ ಸೆರೆ ಹಿಡಿಯುವುದಕ್ಕೆ ಶಿಕ್ಷಣ ಇಲಾಖೆ ಸಂಪೂರ್ಣ ನಿಷೇಧ ಹೇರಿದೆ.
By Darshan Shetty Narkali | ದರ್ಶನ್ ಶೆಟ್ಟಿ ನಾರ್ಕಳಿ
1 min read
ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ ಜಾರಿ ಮಾಡಲಾಗಿದೆ. ಸೆಲ್ಪಿ, ರೀಲ್ಸ್ ಹುಚ್ಚಿಗಾಗಿ ಅಪಾಯಕಾರಿ ಸ್ಥಳಗಳಲ್ಲಿ ವಿದ್ಯಾರ್ಥಿಗಳು ಮೈ ಮರೆಯುತ್ತಿರುವುದನ್ನು ತಪ್ಪಿಸುವ ಸಲುವಾಗಿ ಕಾಲೇಜು ಶಿಕ್ಷಣ ಇಲಾಖೆ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.
ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ಸೆಲ್ಪಿ ಹಾಗೂ ವಿಡಿಯೋ, ರೀಲ್ಸ್ ಸೆರೆ ಹಿಡಿಯುವುದಕ್ಕೆ ಶಿಕ್ಷಣ ಇಲಾಖೆ ಸಂಪೂರ್ಣ ನಿಷೇಧ ಹೇರಿದೆ. ವಿದ್ಯಾರ್ಥಿಗಳಿಗೆ ಪ್ರವಾಸ ಅನ್ನೋದು ಕೇವಲ ಅಧ್ಯಯನದ ಮುಖ್ಯ ಉದ್ದೇಶವಾಗಿರಬೇಕು. ಪ್ರವಾಸದ ವೇಳೆಯಲ್ಲಿ ಮೊಬೈಲ್ ಬಳಕೆ ಮಾಡುವುದರಿಂದ ಮಕ್ಕಳ ಗಮನ ಬೇರೆಡೆಗೆ ಹರಿದು ಅಪಾಯಗಳು ಸಂಭವಿಸುವ ಸಾಧ್ಯತೆಯಿದೆ. ಇದೇ ಕಾರಣದಿಂದಲೇ ಇದೀಗ ಹೊಸ ರೂಲ್ಸ್ ಜಾರಿ ಮಾಡಲಾಗಿದೆ.
ಇನ್ಮುಂದೆ ಕಾಲೇಜುಗಳು ವಿದ್ಯಾರ್ಥಿಗಳ ಪ್ರವಾಸಕ್ಕೆ ಕಡ್ಡಾಯವಾಗಿ ಇಲಾಖೆಯ ಅನುಮತಿಯನ್ನು ಪಡೆಯಲೇ ಬೇಕಾಗಿದೆ. ಕಾಲೇಜು ಶಿಕ್ಷಣ ಇಲಾಖೆಯ ಪೂರ್ವ ಲಿಖಿತ ಅನುಮತಿ ಇಲ್ಲದೇ ಯಾವುದೇ ಪ್ರವಾಸವನ್ನು ಕೈಗೊಳ್ಳುವಂತಿಲ್ಲ. ಮಾತ್ರವಲ್ಲ ಪ್ರವಾಸದ ಸಂಪೂರ್ಣ ವಿವರ, ಭೇಟಿ ನೀಡುವ ಸ್ಥಳಗಳ ಮಾಹಿತಿ, ಯಾವ ಮಾರ್ಗದಲ್ಲಿ ಸಂಚಾರ ಮಾಡುತ್ತಾರೆ ಅನ್ನೋ ಕುರಿತ ವಿವರವನ್ನು ಇಲಾಖೆಗೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಕಾಲೇಜುಗಳು ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮೊದಲು ಪೋಷಕರಿಂದ ಕಡ್ಡಾಯವಾಗಿ ಅನುಮತಿ ಪತ್ರವನ್ನು ಪಡೆಯಬೇಕಾಗಿದೆ. ಜೊತೆಗೆ ವಿದ್ಯಾರ್ಥಿಗಳಿಂದಲೂ ಮುಚ್ಚಳಿಕೆಯನ್ನು ಬರೆಸಿಕೊಂಡು, ಅದಕ್ಕೆ ಪೋಷಕರ ಸಹಿಯೊಂದಿಗೆ ಪತ್ರವನ್ನು ಕಾಲೇಜುಗಳು ಇಲಾಖೆಗೆ ಸಲ್ಲಿಸಬೇಕಾಗಿದೆ. ಇನ್ನು ಮಳೆಗಾಲದಲ್ಲಿ ಶೈಕ್ಷಣಿಕ ಪ್ರವಾಸ ಆಯೋಜಿಸುವುದಕ್ಕೆ ನಿಷೇಧ ಹೇರಲಾಗಿದೆ. ವಿದ್ಯಾರ್ಥಿಗಳ ಜೊತೆಗೆ ಖಾಯಂ ಉಪನ್ಯಾಸಕರು ಕಡ್ಡಾಯವಾಗಿ ಪ್ರವಾಸಕ್ಕೆ ತೆರಳಬೇಕು, ಕೇವಲ ಅತಿಥಿ ಉಪನ್ಯಾಸಕರನ್ನು ಮಾತ್ರವೇ ಪ್ರವಾಸಕ್ಕೆ ಕಳುಹಿಸುವಂತಿಲ್ಲ. ಖಾಯಂ ಉಪನ್ಯಾಸಕರ ಜೊತೆಗೆ ಮಹಿಳಾ ಉಪನ್ಯಾಸಕಿಯರು, ಡಿ ದರ್ಜೆ ನೌಕರರು ಕಡ್ಡಾಯವಾಗಿ ಇರಲೇ ಬೇಕು.
ಕೇವಲ ಕಾಲೇಜು ಶಿಕ್ಷಣ ಇಲಾಖೆಯ ಅನುಮತಿ ಮಾತ್ರವಲ್ಲ, ಪ್ರವಾಸ ಆರಂಭಕ್ಕೂ ಮೊದಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದನ್ನು ಕಡ್ಡಾಯಗೊಳಿಸಬೇಕಾಗಿದೆ. ಕಾಲೇಜು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಕೇವಲ ಸರಕಾರಿ ಕಾಲೇಜುಗಳಿಗೆ ಮಾತ್ರವಲ್ಲ, ಖಾಸಗಿ ಹಾಗೂ ಅನುದಾನಿತ ಕಾಲೇಜುಗಳಿಗೂ ಅನ್ವಯವಾಗಲಿದೆ. ಒಂದೊಮ್ಮೆ ಆದೇಶ ಉಲ್ಲಂಘಿಸಿದ ಕಾಲೇಜುಗಳ ವಿರುದ್ದ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆಯನ್ನು ನೀಡಿದೆ.
Topics
ಸಂಬಂಧಿತ ಸುದ್ದಿಗಳು
karnataka
ತುಳುವಿಗೆ ಸಿಕ್ತು ಎರಡನೇ ರಾಜ್ಯ ಭಾಷೆ ಸ್ಥಾನಮಾನ : ಕಾಫಿನಾಡಲ್ಲೀಗ ಕೊಡವ ಭಾಷೆಗೆ ಮಾನ್ಯತೆಯ ಕೂಗು
karnataka
ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಆರ್ಭಟಿಸಲಿದೆ ಮಳೆ : 13 ಜಿಲ್ಲೆಗಳಿಗೆ ಜಾರಿಯಾಯ್ತು ಯೆಲ್ಲೋ ಅಲರ್ಟ್ ಘೋಷಣೆ
karnataka
ಪ್ರವಾಸೋದ್ಯಮದ ಚಟುವಟಿಕೆಗಳಿಗೆ ಬಳಸುವ ಯೋಜನೆ ಕೈ ಬಿಟ್ಟು ವಿಜ್ಞಾನ ಹಾಗೂ ತಂತ್ರಜ್ಞಾನ ಬಳಕೆಗೆ ಪಿಲಿಕುಳಕ್ಕೆ ಭೂಮಿ ನೀಡಲು ನಿರ್ಧರಿಸಿದ ಸರ್ಕಾರ!
karnataka

