ಕರ್ನಾಟಕದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆ : 40 ಕಿ.ಮೀ ವೇಗದಲ್ಲಿ ಬಿರುಗಾಳಿ, ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕದಾದ್ಯಂತ ಮುಂದಿನ ಎರಡು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಕರ್ನಾಟಕದಾದ್ಯಂತ ಮುಂದಿನ ಎರಡು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ಒಳನಾಡಿನ ಬಹುತೇಕ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಮತ್ತು ರೈತರು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕೆಂದು ಕೋರಲಾಗಿದೆ.
ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಹಲವು ಪ್ರದೇಶಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ವರುಣನ ಸಿಂಚನವಾಗಲಿದೆ. ಇದರೊಂದಿಗೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ದೊರೆತಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಮಲ್ನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಹವಾಮಾನದಲ್ಲಿ ಏರುಪೇರಾಗಲಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಮಳೆಯ ಆರ್ಭಟವು ನಾಳೆಯೂ ಮುಂದುವರಿಯಲಿದ್ದು, ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮೂಲಕ ವಾತಾವರಣ ತಂಪಾಗುವ ನಿರೀಕ್ಷೆಯಿದೆ.
Topics
ಸಂಬಂಧಿತ ಸುದ್ದಿಗಳು
karnataka
ಚಾರಣ ಸ್ಥಳಗಳಿಗೆ ದಿನಕ್ಕೆ 150 ಜನರಿಗಷ್ಟೇ ಎಂಟ್ರಿ: ನಿಯಮ ಉಲ್ಲಂಘಿಸಿದರೆ ಬ್ಲ್ಯಾಕ್ಲಿಸ್ಟ್ ಸೇರ್ಪಡೆ, ಡ್ರೋನ್ ಕಣ್ಗಾವಲು!
karnataka
ಹಳೇ ಪಿಂಚಣಿ ಪದ್ಧತಿ ಜಾರಿಗೆ ರಾಜ್ಯ ಸರ್ಕಾರ ಗಂಭೀರ ತೀರ್ಮಾನ : ಶೀಘ್ರದಲ್ಲೇ ಹೊರಬೀಳಲಿದೆ ಅಧಿಕೃತ ಆದೇಶ
karnataka
ಜೊಮ್ಯಾಟೋ ಆರ್ಡರ್ನೊಂದಿಗೆ ಬಂತು ಬೀಡಿ..! : ನೆಟ್ಟಿಗರಿಂದ ಭಾರೀ ಆಕ್ರೋಶ
karnataka

