karnatakaಪ್ರಮುಖ ಸುದ್ದಿಗಳು

ಸಿದ್ದರಾಮಯ್ಯ ಸ್ಟಿಂಗ್‌ ಆಪರೇಷನ್‌ ವಿರುದ್ದ ತಡೆಯಾಜ್ಞೆ: ಇಬ್ಬರು ಅರೆಸ್ಟ್‌ ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಸಿಬಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

By Arun Gundmi | ಅರುಣ್‌ ಗುಂಡ್ಮಿ · Editor-in-Chief

1 min read

WhatsAppPost
Siddaramaiah sting operation-stay order two arrested
Siddaramaiah sting operation-stay order two arrested

ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆ ತರುವ ಸಲುವಾಗಿ ವಿಡಿಯೋವೊಂದನ್ನು ಹರಿಬಿಟ್ಟ ಪ್ರಕರಣದ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಸಿಸಿಬಿ ಸೈಬರ್‌ ಕ್ರೈಂ ಪೊಲೀಸರಿಗೆ ಆದೇಶಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಸಿಬಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಸೋಶಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಆಗಿರುವ ವಿಡಿಯೋದ ಐಪಿ ಅಡ್ರೆಸ್‌ ಪತ್ತೆ ಕಾರ್ಯ ಆರಂಭಿಸಿದ್ದಾರೆ.

ತನ್ನ ಹೆಸರನ್ನು ಥಳಕು ಹಾಕಲಾಗಿರುವ ಎರಡು ವಿಡಿಯಗಳನ್ನು ಪ್ರಸಾರ ಮಾಡದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 42 ಮಾಧ್ಯಮ ಸಂಸ್ಥೆ, ಡಿಜಿಟಲ್‌ ವೇದಿಕೆ ಹಾಗೂ ಇತರರ ವಿರುದ್ದ ಬೆಂಗಳೂರಿನ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಕಳೆದ ಕೆಲವು ದಿನಗಳಿಂದಲೂ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಸ್ಟಿಂಗ್‌ ಆಪರೇಷನ್‌ ವಿಡಿಯೋಗೂ, ನನಗೂ ಯಾವುದೇ ರೀತಿಯಲ್ಲಿಯೂ ಸಂಬಂಧವಿಲ್ಲ. ನಾನು ಸಂಪೂರ್ಣ ನಿರಪರಾಧಿ ಅನ್ನೋದು ನನ್ನ ಆತ್ಮಸಾಕ್ಷಿಗೆ ಗೊತ್ತಿದೆ. ತನ್ನ ವಿರುದ್ದದ ರಾಜಕೀಯ ದುರುದ್ದೇಶ ಮತ್ತು ತನ್ನ ಚಾರಿತ್ರ್ಯ ಹರಣ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹರಿಬಿಟ್ಟವರ ವಿರುದ್ದ ಈಗಾಗಲೇ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದು, ಐಪಿ ಅಡ್ರೆಸ್‌ ಮತ್ತು ಡಿವೈಸ್‌ ಓವರ್‌ಗಳ ಮಾಹಿತಿಯನ್ನೂ ಒಳಗೊಂಡು ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ.

Topics

ಸಂಬಂಧಿತ ಸುದ್ದಿಗಳು