Kannada News Next

karnataka

ಕರಾವಳಿಯಲ್ಲಿ ಬಾರೀ ಮಳೆ : ಈ ತಾಲೂಕುಗಳ ಶಾಲೆಗೆ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ಮತ್ತು ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

By Arun Gundmi | ಅರುಣ್‌ ಗುಂಡ್ಮಿ Editor-in-Chief
Uttar Kannada Heavy Rain joida and Dandeli Heavy Rain

ಕಾರವಾರ : ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ( Joida) ಮತ್ತು ದಾಂಡೇಲಿ ( Dandeli) ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ( School Holiday) ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ. ಜೊಯಿಡಾ, ದಾಂಡೇಲಿ, ಶಿರಸಿ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಇದೀಗ ರಜೆ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಮಳೆ ಆರ್ಭಟ

ಉತ್ತರ ಕನ್ನಡ ಜಿಲ್ಲೆ ಮಾತ್ರವಲ್ಲ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ರಣ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಟ್ಟಣ ಬಹುತೇಕ ಜಲಾವೃತವಾಗಿದ್ದು, ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ