Kannada News Next

news

ಖಾದಿ ಗ್ರಾಮೋದ್ಯೋಗ ನೇಮಕಾತಿ : ಪರೀಕ್ಷೆಯಿಲ್ಲದೇ 40,000 ವರೆಗೆ ವೇತನ ! ಯಾರು ಅರ್ಜಿ ಸಲ್ಲಿಸಬಹುದು?

ಖಾದಿ ಗ್ರಾಮೋದ್ಯೋಗ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 30, 2026 ಕೊನೆಯ ದಿನ.

By Archana V Bhat
Khadi Gramodyog KVIC Recruitment 2026

ನೀವು ಕೆಲಸದ ಹುಡಕಾಟದಲ್ಲಿದ್ದರೆ ಈ ಸುದ್ದಿ ನಿಮಗಾಗಿ. ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC) 50 ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ವಿವಿಧ ಹುದ್ದೆಗಳಿಗೆ ಯುವವೃತ್ತಿಪರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು ಸೆಪ್ಟೆಂಬರ್‌ 30 ಕೊನೆಯ ದಿನವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಧಿಕೃತ ವೆಬ್‌ಸೈಟ್‌ kvic.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ

ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಜೊತೆಗೆ MS Excel ಮತ್ತು MS PowerPoint ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ

ಖಾದಿ ಮತ್ತು ಗ್ರಾಮೋದ್ಯೋಗ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯೋಮಿತಿಯು 40 ವರ್ಷದಿಂದ 65 ವರ್ಷಗಳ ಒಳಗೆ ಇರಬೇಕು. ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಬದಲಾವಣೆಗಳಿರುವುದನ್ನು ಗಮನಿಸಿ.

ಆಯ್ಕೆ ಪ್ರಕ್ರಿಯೆ

ಅರ್ಜಿ ಪರಿಶೀಲನೆ, ಶಾರ್ಟ್‌ಲಿಸ್ಟ್‌, ವೈಯಕ್ತಿಕ ಸಂದರ್ಶನ ಮತ್ತು ದಾಖಲೆ ಪರಿಶೀಲನೆಯ ಆಧಾರದ ಮೇಲೆ ಕೆವಿಐಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಿದೆ.

ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ತಿಂಗಳಿಗೆ ₹25,000 ದಿಂದ ₹40,000 ವರೆಗೆ ನೀಡಲಾಗುತ್ತದೆ. ಆಯೋಗದ ನಿಯಮಾವಳಿಗಳ ಪ್ರಕಾರ ಇತರ ಸೌಲಭ್ಯಗಳು ಮತ್ತು ಭತ್ಯೆಗಳು ಸಹ ಇರಲಿದೆ.

ಅರ್ಜಿ ಸಲ್ಲಿಕೆ ಹೇಗೆ?

ಈ ನೇಮಕಾತಿಯಲ್ಲಿ ಎಲ್ಲ ಹುದ್ದೆಗಳಿಗೆ ಅರ್ಜಿಯನ್ನು ಆನ್‌ಲೈನ್‌ ಮೂಲಕ ಸ್ವೀಕರಿಸಲಾಗುತ್ತದೆ. ಇದಕ್ಕೆ apps.kvic.gov.in/KVIC-RECRUITMENT ಗೆ ಭೇಟಿ ನೀಡಬೇಕು. ಅಲ್ಲಿ ನೋಂದಣಿ ಮೇಲೆ ಕ್ಲಿಕ್‌ ಮಾಡಿ, ಅಗತ್ಯ ಮಾಹಿತಿಗಳನ್ನು ನಮೂದಿಸಿ ಅರ್ಜಿ ಸಲ್ಲಿಸಬಹುದು.