ರಾಜ್ಯದ ಪ್ರತಿಷ್ಠಿತ ಜಿಲ್ಲೆಗಳಲ್ಲಿ ಒಂದಾದ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು 'ಮಂಗಳೂರು ಜಿಲ್ಲೆ' ಎಂದು ಬದಲಾಯಿಸಬೇಕು ಎಂದು ರಾಜಕಾರಣಿಗಳು, ಹಿರಿಯರು, ಸಾಮಾಜಿಕ ಚಿಂತಕರು ಮತ್ತು ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹತ್ತು ಹಲವು ಮನವಿಗಳು ಸಲ್ಲಿಕೆಯಾಗಿದ್ದವು. ಈ ಎಲ್ಲಾ ಪ್ರಮುಖ ಮನವಿಗಳು ಹಾಗೂ ಆಡಳಿತಾತ್ಮಕ ಸುಧಾರಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಸೆಕ್ಷನ್ 4(4A) ಹಾಗೂ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಮಾರ್ಗಸೂಚಿಗಳ ಅನ್ವಯ ಸರ್ಕಾರ ಈ ಪ್ರಕ್ರಿಯೆಗೆ ಮುಂದಾಗಿದೆ.
ಸಾರ್ವಜನಿಕರ ಅಭಿಪ್ರಾಯಕ್ಕೆ ಆಹ್ವಾನ:
ಜಿಲ್ಲೆಯ ಮರುನಾಮಕರಣದ ಕುರಿತು ಸಾರ್ವಜನಿಕರು ತಮ್ಮ ಸಲಹೆ, ಅಭಿಪ್ರಾಯ ಅಥವಾ ಆಕ್ಷೇಪಣೆಗಳನ್ನು ತಿಳಿಸಲು ಅವಕಾಶ ನೀಡಲಾಗಿದೆ. ಅಧಿಸೂಚನೆ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ತಮ್ಮ ಅಭಿಪ್ರಾಯವನ್ನು ಕಳುಹಿಸಬಹುದಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ಪ್ರಮುಖ ವಿಳಾಸಗಳು:
ನಿಮ್ಮ ಅಭಿಪ್ರಾಯಗಳನ್ನು ಕೆಳಗಿನ ವಿಳಾಸಗಳಲ್ಲಿ ಯಾವುದಾದರೂ ಒಂದಕ್ಕೆ ಅಥವಾ ನೇರವಾಗಿ ಇ-ಮೇಲ್ ಮೂಲಕ ಕಳುಹಿಸಬಹುದು:
ಮುಖ್ಯಮಂತ್ರಿಯವರ ಸಚಿವಾಲಯ
ಕೊಠಡಿ ಸಂಖ್ಯೆ 235, 2ನೇ ಮಹಡಿ, ವಿಧಾನ ಸೌಧ, ಬೆಂಗಳೂರು - 560001
ಇ-ಮೇಲ್: cm.kar@nic.in
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಕಂದಾಯ ಇಲಾಖೆ)
ಕೊಠಡಿ ಸಂಖ್ಯೆ 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು - 560001
ಇ-ಮೇಲ್: Prs.revenue@gmail.com
ಜಿಲ್ಲಾಧಿಕಾರಿಗಳ ಕಾರ್ಯಾಲಯ (ದಕ್ಷಿಣ ಕನ್ನಡ)
ಪ್ರಜಾಸೌಧ, ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇಂದ್ರ, ಪಡೀಲು, ಮಂಗಳೂರು - 575007
ಇ-ಮೇಲ್: dc.mnglr@gmail.com
ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆಗೆ ಸರ್ಕಾರದ ಹೆಜ್ಜೆ: ಸಾರ್ವಜನಿಕರ ಅಭಿಪ್ರಾಯಕ್ಕೆ ಆಹ್ವಾನ
ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು 'ಮಂಗಳೂರು ಜಿಲ್ಲೆ' ಎಂದು ಬದಲಾಯಿಸಬೇಕು ಎಂದು ರಾಜಕಾರಣಿಗಳು, ಹಿರಿಯರು, ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹತ್ತು ಹಲವು ಮನವಿಗಳು ಸಲ್ಲಿಕೆಯಾಗಿದ್ದವು.