mangaluruಪ್ರಮುಖ ಸುದ್ದಿಗಳು

School Holiday : ನಾಗರ ಪಂಚಮಿ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಶಾಲೆಗೆ ನಾಳೆ ರಜೆ ಘೋಷಣೆ

ನಾಗರ ಪಂಚಮಿ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕವಾಗಿ ಜಿಲ್ಲಾಧಿಕಾರಿಗಳಿಗೆ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಸುವಂತೆ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.

By Arun Gundmi | ಅರುಣ್‌ ಗುಂಡ್ಮಿ · Editor-in-Chief

1 min read

WhatsAppPost
Nagara Panchami Holiday declared for Udupi, Dakshina Kannada districts tomorrow
Nagara Panchami Holiday declared for Udupi, Dakshina Kannada districts tomorrow

ಉಡುಪಿ/ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದು, ಆಗಸ್ಟ್ 17, ಸೋಮವಾರದಂದು ನಾಗರ ಪಂಚಮಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಕರ್ನಾಟಕ ಸರಕಾರದ ಅಧೀನ ಕಾರ್ಯದರ್ಶಿ ಚಾಣದರಂಗಯ್ಯ ಎನ್‌.ಆರ್.‌ ಅವರು ಆದೇಶ ಹೊರಡಿಸಿದ್ದಾರೆ.

ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕವಾಗಿ ಜಿಲ್ಲಾಧಿಕಾರಿಗಳಿಗೆ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಸುವಂತೆ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ನಾಗರಾಧನೆಗೆ ವಿಶೇಷ ಮಹತ್ವವಿದ್ದು, ಹಲವು ದೇವಸ್ಥಾನಗಳು ಹಾಗೂ ನಾಗಬನಗಳಲ್ಲಿ ವಿಶೇಷ ಪೂಜೆ, ನಾಗತಂಬಿಲ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಶಾಲೆ, ಕಾಲೇಜು ಮಾತ್ರವಲ್ಲದೇ ಸರಕಾರಿ ಕಚೇರಿಗಳಿಗೂ ಕೂಡ ರಜೆ ಘೋಷಿಸಲಾಗಿದೆ.

2026ರ ಕರ್ನಾಟಕ ಸರ್ಕಾರದ ಸಾಮಾನ್ಯ ಸಾರ್ವಜನಿಕ ರಜೆ ಪಟ್ಟಿಯಲ್ಲಿ ನಾಗರ ಪಂಚಮಿ ರಾಜ್ಯವ್ಯಾಪಿ ಸರ್ಕಾರಿ ರಜೆ ಘೋಷಣೆ ಮಾಡಿಲ್ಲ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಲ್ಲಿ ನಾಗರ ಪಂಚಮಿ ಹಬ್ಬಕ್ಕೆ ವಿಶೇಷವಾದ ಮಹತ್ವವಿದೆ. ಇದೇ ಕಾರಣದಿಂದಲೇ ಶಾಲೆ, ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ನಾಗರ ಪಂಚಮಿ : ಶಾಲೆಗಳಿಗೆ ರಜೆ ನೀಡಲು ಕಾರಣಗಳು

  • ಕರಾವಳಿ ಭಾಗದಲ್ಲಿ ನಾಗರ ಪಂಚಮಿ ಪ್ರಮುಖ ಧಾರ್ಮಿಕ ಹಬ್ಬ.

  • ಮನೆ, ನಾಗಬನ ಹಾಗೂ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ನಡೆಯುತ್ತದೆ.

  • ಕುಟುಂಬದವರು ಹಬ್ಬದ ಆಚರಣೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದು.

  • ಸ್ಥಳೀಯವಾಗಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಹಬ್ಬದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸ್ಥಳೀಯ ರಜೆ ಘೋಷಿಸಲಾಗಿದೆ.

Topics

ಸಂಬಂಧಿತ ಸುದ್ದಿಗಳು