ಪದವೀಧರರಿಗೆ ಸುವರ್ಣಾವಕಾಶ : SBI 1538 ಕ್ಲರ್ಕ್ ಹುದ್ದೆಗೆ ಅರ್ಜಿ
ಎಸ್‌ಬಿಐ 1538 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆಗಸ್ಟ್ 27, 2026 ರರೊಳಗೆ ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ.
By Archa V Bhat
1 min read
ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಉದ್ಯೋಗ ಮಾಡಬೇಕೆಂಬ ಆಸೆ ಹೊತ್ತ ಯುವ ಪದವೀಧರರಿಗೆ ಸುವರ್ಣಾಕಾಶ. ಎಸ್‌ಬಿಐ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 1,538 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 27, 2026 ಕೊನೆಯ ದಿನವಾಗಿದೆ. ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು? ಇಲ್ಲಿದೆ ಓದಿ.
ವಯೋಮಿತಿ
ಎಸ್‌ಬಿಐನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸನ್ನು 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳು ಎಂದು ನಿಗದಿಪಡಿಸಲಾಗಿದೆ. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಪಡೆದಿರಬೇಕು.
ಅರ್ಜಿ ಶುಲ್ಕ
ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕು. ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹750. ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಲಭ್ಯವಿದೆ.
ಅರ್ಜಿ ಸಲ್ಲಿಕೆ ಹೇಗೆ?
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ ಎಸ್‌ಬಿಐ ನೀಡಿರುವ ಅಧಿಕೃತ ವೆಬ್‌ಸೈಟ್ ‘ibpsreg.ibps.in/sbijasrdjl26/’ ಗೆ ಭೇಟಿ ನೀಡಬೇಕು.
ಅಲ್ಲಿ ಬಲಭಾಗದಲ್ಲಿರು ನ್ಯೂ ರೆಜಿಸ್ಟ್ರೇಷನ್ ಮೇಲೆ ಕ್ಲಿಕ್ಕಿಸಿ.
ಅಗತ್ಯ ಮಾಹಿತಿಗಳನ್ನು ನೀಡುವ ಮೂಲಕ ನಿಮ್ಮ ಹೆಸರು ನೋಂದಾಯಿಸಿಕೊಳ್ಳಿ.
ನಂತರ ಅರ್ಜಿ ಶುಲ್ಕ ಪಾವತಿಸಿ. ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಬಳಿಕ ಇನ್ನೊಮ್ಮೆ ಫಾರ್ಮ್ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಕೆಯ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
Topics

