ಉಡುಪಿಯಲ್ಲಿ ಮತ್ತೊಂದು ಶೂಟೌಟ್‌: ಕಾಂಗ್ರೆಸ್ ಮುಖಂಡ ಡೇವಿಡ್‌ ಡಿಸೋಜಾ ಹತ್ಯೆ

ಉಡುಪಿಯಲ್ಲಿ ಮತ್ತೊಂದು ಭೀಕರ ಶೂಟೌಟ್‌ ನಡೆದಿದ್ದು, ಮುದರಂಗಡಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಉದ್ಯಮಿ ಡೇವಿಡ್‌ ಡಿಸೋಜಾ ಅವರ ಮೇಲೆ ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ

By Meghana Pranuth | ಮೇಘನಾ ಪ್ರಣೂತ್‌

1 min read

WhatsAppPost
Congress leader David D'Souza murdered
Congress leader David D'Souza murdered

ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಶೂಟೌಟ್‌ ನಡೆದಿದ್ದು, ಕರಾವಳಿ ಭಾಗದ ಜನರನ್ನು ಬೆಚ್ಚಿಬೀಳಿಸಿದೆ. ಮುದರಂಗಡಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಸ್ಥಳೀಯ ಕಾಂಗ್ರೆಸ್‌ ಮುಖಂಡ, ಉದ್ಯಮಿ ಡೇವಿಡ್‌ ಡಿಸೋಜಾ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ದಾಳಿಯ ತೀವ್ರತೆಗೆ ತೀವ್ರವಾಗಿ ಗಾಯಗೊಂಡ ಡೇವಿಡ್‌ ಡಿಸೋಜಾ ಸ್ಥಳದಲ್ಲೇ ಅಂತಿಮ ಉಸಿರೆಳೆದಿದ್ದಾರೆ.  ಡೇವಿಡ್‌ ಅವರ ಹತ್ಯೆ ಇಡೀ ಪ್ರದೇಶದಲ್ಲಿ ತೀವ್ರ ಆತಂಕ ಹಾಗೂ ಕಂಗಾಲಿನ ವಾತಾವರಣ ಸೃಷ್ಟಿಸಿದೆ.

ಘಟನೆ ನಡೆದ ತಕ್ಷಣವೇ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶೂಟೌಟ್‌ಗೆ ನಿಖರವಾದ ಕಾರಣ ಏನೆಂಬುದು ತಕ್ಷಣಕ್ಕೆ ಬಹಿರಂಗವಾಗಿಲ್ಲವಾದರೂ, ವೈಯಕ್ತಿಕ ದ್ವೇಷ ಅಥವಾ ಉದ್ಯಮಕ್ಕೆ ಸಂಬಂಧಿಸಿದ ವೈಷಮ್ಯವಿರಬಹುದೇ ಎಂಬ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಹತ್ಯೆ ನಡೆಸಿ ಪರಾರಿಯಾಗಿರುವ ಹಂತಕರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಸರಣಿ ಶೂಟೌಟ್‌ ಮಾದರಿಯ ಘಟನೆಗಳು ಕರಾವಳಿ ಜನತೆಯನ್ನು ಬೆಚ್ಚಿಬೀಳಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.  

Topics

ಸಂಬಂಧಿತ ಸುದ್ದಿಗಳು