ಬ್ರಹ್ಮಾವರ: ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ- ಆರೋಪಿ ಅರೆಸ್ಟ್‌

ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಗುಡ್ಡಿ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಕುಶಾಲ್ ಶೆಟ್ಟಿ

By Arun Gundmi | ಅರುಣ್‌ ಗುಂಡ್ಮಿ · Editor-in-Chief

1 min read

WhatsAppPost
Brahmavara Police Station
Brahmavara Police Station

ಬ್ರಹ್ಮಾವರ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬ್ರಹ್ಮಾವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ನಿವಾಸಿ ಕುಶಾಲ್ ಶೆಟ್ಟಿ (66 ವರ್ಷ) ಎಂದು ಗುರುತಿಸಲಾಗಿದೆ.

ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಗುಡ್ಡಿ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಕುಶಾಲ್ ಶೆಟ್ಟಿ ಮಟ್ಕಾ ಜುಗಾರಿ ಆಟಕ್ಕಾಗಿ ಸಾರ್ವಜನಿಕರಿಂದ ಅಕ್ರಮವಾಗಿ ಹಣ ಸಂಗ್ರಹಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು.

ಖಚಿತ ಮಾಹಿತಿಯ ಮೇರೆಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪಿಎಸ್‌ಐ ಮುಕ್ತಾಬಾಯಿ ಅವರು ಠಾಣಾ ಸಿಬ್ಬಂದಿ ಸ್ಥಳಕ್ಕೆ ತೆರಳಿದ ವೇಳೆಯಲ್ಲಿ ಮಟ್ಕಾ ನಡೆಸುತ್ತಿರುವುದು ಪತ್ತೆಯಾಗಿದೆ.

ಅಲ್ಲದೇ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಮಟ್ಕಾ ಜುಗಾರಿ ನಡೆಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಂಧಿತನಿಂದ ಮಟ್ಕಾ ಬರೆಯುತ್ತಿದ್ದ ಚೀಟಿ, ಸುಮಾರು 2 ಸಾವಿರ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದ ತನಿಖೆ ನಡೆಸುತ್ತಿದ್ದಾರೆ.

Topics

ಸಂಬಂಧಿತ ಸುದ್ದಿಗಳು