Kannada News Next

udupi

ಕಾಂಗ್ರೆಸ್ ಮುಖಂಡ ಮುನಿಯಾಲು ಪರಮಾಪ್ತ ಸೂರಜ್ ಶೆಟ್ಟಿ ಸೇರಿ ಮೂವರು ಸಸ್ಪೆಂಡ್

ಡುಪಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಹುದ್ದೆ ಹಾಗೂ ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಬಿಡುಗಡೆಗೊಳಿಸಲಾಗಿದೆ.

By Meghana Pranuth | ಮೇಘನಾ ಪ್ರಣೂತ್‌
sooraj shetty

ಉಡುಪಿ : ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಹುದ್ದೆ ಹಾಗೂ ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಬಿಡುಗಡೆಗೊಳಿಸಲಾಗಿದೆ.

ತಾತ್ಕಾಲಿಕವಾಗಿ ಹುದ್ದೆಮುಕ್ತಗೊಂಡವರಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಅಧ್ಯಕ್ಷ ಸುದೇಶ್ ಶೆಟ್ಟಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಅಧ್ಯಕ್ಷ ಸೂರಜ್ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷ ಜಾನ್ಸನ್ ಹಾಗೂ ಬೈಂದೂರು ಬ್ಲಾಕ್ ಅಧ್ಯಕ್ಷ ಭರತ್ ದೇವಾಡಿಗ ಸೇರಿದ್ದಾರೆ.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ (ಕೆಪಿವೈಸಿಸಿ) ವತಿಯಿಂದ ವಹಿಸಲಾಗಿರುವ ಸಂಘಟನೆ, ಕಾರ್ಯಕ್ರಮಗಳು, ಸಭೆಗಳು ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗವಹಿಸುವ ಅಗತ್ಯವಿದ್ದರೂ, ಇತ್ತೀಚಿನ ಕಾರ್ಯವೈಖರಿಯನ್ನು ಪರಿಶೀಲಿಸಿದಾಗ ಕೆಲವರು ನಿಷ್ಕ್ರಿಯವಾಗಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪಕ್ಷದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿರುವ ಹಿನ್ನೆಲೆಯಲ್ಲಿ, ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಹುದ್ದೆಯಿಂದ ತಡೆಹಿಡಿಯಲಾಗಿದೆ ಎಂದು ಕೆಪಿವೈಸಿಸಿ ತಿಳಿಸಿದೆ.