ಉಡುಪಿಯಲ್ಲಿ ಭಾರೀ ಮಳೆ : ಆಗಸ್ಟ್ 4ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಆಗಸ್ಟ್ 4ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
By ಅಶ್ವಥ್ ಆಚಾರ್ಯ | Ashwath Acharya
1 min read
ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದ್ದು, ಅಗಸ್ಟ್ 4 ರಂದು ಉಡುಪಿ ಜಿಲ್ಲೆಯಾದ್ಯಂತ ಭಾರೀಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಅಗಸ್ಟ್ 4ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 4ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಉಳಿದಂತೆ ಪದವಿಪೂರ್ವ ಕಾಲೇಜುಗಳು, ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಐಟಿಐ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಎಂದಿನಂತೆ ನಡೆಯಲಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.
ಬಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದು, ಶಾಲೆ - ಕಾಲೇಜುಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟವರು ಕಡ್ಡಾಯವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಲಾಗಿದೆ.
Topics
ಸಂಬಂಧಿತ ಸುದ್ದಿಗಳು
udupi
ಕಾರ್ಕಳ-ಮೂಡುಬಿದಿರೆ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮಾಜಿ ಸಚಿವ ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ
udupi
ಮಣಿಪಾಲ : ಅವಧಿ ಮೀರಿ ಗೇಮ್ಸ್ ಸೆಂಟರ್ ಕಾರ್ಯಾಚರಣೆ, ಎಫ್ಐಆರ್ ದಾಖಲು
udupi
ಉಡುಪಿ: ವಿದ್ಯಾರ್ಥಿಗಳಿಗೆ MDMA ಡ್ರಗ್ಸ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಮಣಿಪಾಲ ಪೊಲೀಸರು; ಇಬ್ಬರ ಬಂಧನ
udupi

