ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು
ಆ.27ರಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಷೇಕ್ ಪೂಜಾರಿ ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ ಸುದ್ದಿ ಹರಿದಾಡಿತ್ತು.
By ಅಶ್ವಥ್ ಆಚಾರ್ಯ | Ashwath Acharya
1 min read
ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡ ಪರಿಣಾಮ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದ ಟ್ರೈನಿ ಪೈಲಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಆ.27ರಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಷೇಕ್ ಪೂಜಾರಿ ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ ಸುದ್ದಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಅಭಿಷೇಕ್ ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಕಾನ್ಪುರದಲ್ಲಿ ಖಾಸಗಿ ಟ್ರೈನಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು ಎಂದು ತಿಳಿಸಲಾಗಿದೆ.
ಅಭಿಷೇಕ್ ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ಆಗಾಗ್ಗೆ ಕುಟುಂಬದೊಂದಿಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಭೇಟಿ ನೀಡುತ್ತಿದ್ದರು ಎನ್ನಲಾಗಿದೆ.
ಅಪಘಾತದ ಮಾಹಿತಿ ತಿಳಿದು ಕುಟುಂಬಸ್ಥರು ಮುಂದಿನ ಪ್ರಕ್ರಿಯೆಗಳಿಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯವಾಗಿ ಕಾನೂನು ಕ್ರಮಗಳು ಮುಂದುವರಿದಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
Topics
ಸಂಬಂಧಿತ ಸುದ್ದಿಗಳು
udupi
ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿದವರ ಮಾಹಿತಿ ನೀಡಿ : ಉಡುಪಿ ಜಿಲ್ಲಾಡಳಿತದ ಸೂಚನೆ
udupi
ಉಡುಪಿ : 8 ವರ್ಷಗಳ ಹಿಂದೆ ಮೃತಪಟ್ಟ ಮಗನ ಹೆಸರಲ್ಲಿ ₹5 ಲಕ್ಷಕ್ಕೆ ಬೇಡಿಕೆ: ತಂದೆಗೆ ಬೆದರಿಕೆ, ಇಬ್ಬರು ಅರೆಸ್ಟ್
udupi
ಬೈಂದೂರಿನಲ್ಲಿ 5.20 ಕೋಟಿ ವೆಚ್ಚದ ಆರೋಗ್ಯ ಕೇಂದ್ರಗಳ ಕಾಮಗಾರಿ ಪರಿಶೀಲನೆ
udupi

