ಕೋಟ: ಅಕ್ರಮ ಜಾನುವಾರು ಸಾಗಾಟ; ಬುಲೆರೋ ಪಿಕಪ್ ವಾಹನ ಸೇರಿ 4 ಮಂದಿ ವಶ
ಕೋಟ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಕುಮಾರ್ ಆರ್ ತೆಕ್ಕಟ್ಟೆ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದರು.
By Arun Gundmi | ಅರುಣ್ ಗುಂಡ್ಮಿ · Editor-in-Chief
1 min read
ಕೋಟ : ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕೋಟ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ವಾಹನ ಸಹಿತ ನಾಲ್ವರನ್ನು ಬಂಧಿಸಿರುವ ಘಟನೆ ತೆಕ್ಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೋಟ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಕುಮಾರ್ ಆರ್. ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತೆಕ್ಕಟ್ಟೆ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದರು.
ಈ ವೇಳೆಯಲ್ಲಿ ಕೊಟೇಶ್ವರ ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ KA-40-B-8708 ಸಂಖ್ಯೆಯ ಪಿಕ್ಅಪ್ ವಾಹನವನ್ನು ತಡೆದು ಪೊಲೀಸರು ನಿಲ್ಲಿಸಿದ್ದಾರೆ. ಈ ವೇಳೆಯಲ್ಲಿ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಸಮವಸ್ತ್ರದಲ್ಲಿದ್ದ ಪೊಲೀಸರನ್ನು ನೋಡಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಅವರನ್ನು ತಡೆದು ವಿಚಾರಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಪುನೀತ್ (27 ವರ್ಷ), ಕೃಷ್ಣಪ್ಪ ( 40 ವರ್ಷ), ಶ್ರೀನಿವಾಸ (50 ವರ್ಷ) ಹಾಗೂ ಕೋಲಾರ ಬಾಗೇಪಲ್ಲಿಯ ಗಣೇಶ್ ( 26 ವರ್ಷ) ಎಂದು ಗುರುತಿಸಲಾಗಿದೆ. ಜಾನುವಾರುಗಳ ಕುತ್ತಿಗೆಗೆ ನೈಲಾನ್ ಹಗ್ಗದಿಂದ ಕಟ್ಟಿದ್ದು, ಆಹಾರ, ನೀರು ನೀಡದೇ ಹಿಂಸಾತ್ಮಕವಾಗಿ ಅವುಗಳನ್ನು ನಡೆಸಿಕೊಳ್ಳುತ್ತಿರುವುದು ಕಂಡು ಬಂದಿದೆ.
ಕೋಟ ಠಾಣೆಯ ಪೊಲೀಸು ಒಟ್ಟು 7 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಜಾನುವಾರು ಸಾಗಾಟಕ್ಕೆ ಬಳಸಿದ್ದ ಪಿಕ್ಅಪ್ ವಾಹನ, ಮೊಬೈಲ್ ಪೋನ್ ಹಾಗೂ ನಗದನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಕೋಟಾ ಠಾಣೆಯ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.ನಡೆಸುತ್ತಿದ್ದಾರೆ.
Topics
ಸಂಬಂಧಿತ ಸುದ್ದಿಗಳು
udupi
ಕುಂದಾಪುರ : ಪತಿಯ ಕಿರುಕುಳಕ್ಕೆ ಮನನೊಂದ ಗೃಹಿಣಿ ಫಿನಾಯಿಲ್ ಸೇವನೆ, ದೂರು ದಾಖಲು
udupi
ರೋಟರಿ ಕ್ಲಬ್ ಕೋಟ ಬ್ರಿಗೇಡ್: ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಸಲಕರಣೆ ವಿತರಣೆ
udupi
ಕುಂದಾಪುರ ಜನತೆಗೂ ತಟ್ಟಿದ ಎಲ್ನಿನೋ ಎಫೆಕ್ಟ್ : ಅವಧಿಗೂ ಮೊದಲೇ ವಾರಾಹಿ ನೀರು ಮುಕ್ತಾಯ
udupi

