ಕುಂದಾಪುರ : ಕಳೆದ ಕೆಲವು ವರ್ಷಗಳಿಂದಲೂ ಕುಂದಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ರಿಲಯನ್ಸ್ ಸ್ಮಾರ್ಟ್ ಬಜಾರ್ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅವಘಡಕ್ಕೆ ಕಾರಣವೇನು ಅನ್ನೋದು ಇನ್ನೂ ಖಚಿತವಾಗಿಲ್ಲ, ಆದರೆ ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದೆ ಎನ್ನಲಾಗುತ್ತಿದೆ.
ಐತಿಹಾಸಿಕ ಕುಂದೇಶ್ವರದ ದೇವಸ್ಥಾನಕ್ಕೆ ತೆರಳುವ ಮಾರ್ಗದ ಬಳಿಯಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ರಿಲಯನ್ಸ್ ಸ್ಮಾರ್ಟ್ ಬಜಾರ್ ಕಾರ್ಯನಿರ್ವಹಿಸುತ್ತಿತ್ತು. ಕಟ್ಟಡದ ಒಂದು ಭಾಗದಲ್ಲಿ ಸಣ್ಣದಾಗಿ ಹೊತ್ತಿಕೊಂಡ ಬೆಂಕಿ ನಂತರದಲ್ಲಿ ಪ್ಲೋರ್ಗೆ ವ್ಯಾಪಿಸಿತ್ತು.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಮಾರ್ಟ್ ಬಜಾರ್ಗೆ ಬಂದಿದ್ದ ಗ್ರಾಹಕರು ಭಯಗೊಂಡರು. ನಂತರದಲ್ಲಿ ಗ್ರಾಹಕರು ಹಾಗೂ ಸಿಬ್ಬಂಧಿಗಳು ಕಟ್ಟಡದಿಂದ ಹೊರಗೆ ಓಡಿ ಬಂದಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಈ ಘಟನೆ ಸಂಬಂವಿಸಿದೆ ಎನ್ನಲಾಗುತ್ತಿದೆ. ಆದರೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ.