ಕೋಟ : ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್, ವೀಲ್ ಚೇರ್ ಮುಂತಾದ ಸುಮಾರು ಒಂದು ಲಕ್ಷಕ್ಕೂ ಅಧಿಕ ಮೌಲ್ಯದÀ ವಿವಿಧ ಆರೋಗ್ಯ ಸಲಕರಣೆಗಳ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ, ಆರೋಗ್ಯ ಸಲಕರಣೆಗಳನ್ನು ಹಸ್ತಾಂತರಿಸಿ ಮಾತನಾಡಿದ ರೋಟರಿ ಮಾಜಿ ಜಿಲ್ಲಾ ಗವರ್ನರ್ ರಾಜಾರಾಮ್ ಭಟ್ ಸಮಾಜ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದ್ದು, ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯವಿರುವ ಆರೋಗ್ಯ ಸಲಕರಣೆಗಳನ್ನು ನೀಡಿರುವ ರೋಟರಿ ಕೋಟ ಬ್ರಿಗೇಡ್ ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯ. ಈ ಸಲಕರಣೆಗಳನ್ನು ಸಮರ್ಪಕವಾಗಿ ಬಳಸುವಂತೆ ಕರೆ ನೀಡಿದರು.
ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಾಧವ ಪೈ ಕೊಡುಗೆಗಳನ್ನು ಸ್ವೀಕರಿಸಿ, ಕ್ಲಬ್‌ನ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ರೋಟರಿ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ರೋಟರಿ ವಲಯ ೨ರ ಸಹಾಯಕ ಗವರ್ನರ್ ಸುಧಾಕರ್ ಶೆಟ್ಟಿ, ವಲಯ ತರಬೇತುದಾರ ಸುರೇಶ್ ಬೇಳೂರು, ಮಾಜಿ ಸಹಾಯಕ ಗವರ್ನರ್ ಹಾಗೂ ಕ್ಲಬ್ ಸಲಹೆಗಾರ ಚಂದ್ರಶೇಖರ್ ಮೆಂಡನ್, ವಲಯ ಸೇನಾನಿ ದಯಾನಂದ್ ಆಚಾರ್, ಜೊತೆ ಕಾರ್ಯದರ್ಶಿ ಸುರೇಶ್ ಆಚಾರ್, ಮಾಜಿ ಅಧ್ಯಕ್ಷರಾದ ಶಾನಾಡಿ ಉದಯ್ ಕುಮಾರ್ ಹೆಗ್ಡೆ,
ವಿಷ್ಣುಮೂರ್ತಿ ಉರಾಳ, ಚಾರ್ಟರ್ ಅಧ್ಯಕ್ಷ ಪ್ರಥ್ವಿನ್ ಸಿ. ಮೆಂಡನ್, ಸದಸ್ಯರಾದ ರವಿನಾಥ್ ಪೂಜಾರಿ, ವಸಂತ್ ಪೂಜಾರಿ, ಎಂ.ಸಿ.ಚAದ್ರಶೇಖರ್, ಮಿಥಿಲೇಶ್, ಆ್ಯನ್ಸ್ ಕ್ಲಬ್ ಮಾಜಿ ಅಧ್ಯಕ್ಷೆ ಶಶಿಕಲಾ ಗಣೇಶ್, ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಡಾ.ಗಣೇಶ್ ಯು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.