ಸಮುದ್ರದಲ್ಲಿ ಪರ್ಸೀನ್ ಬೋಟ್ ಮುಳುಗಡೆ: ಕರಾವಳಿ ಕಾವಲು ಪಡೆಯಿಂದ 30 ಮೀನುಗಾರರ ರಕ್ಷಣೆ
ಉಡುಪಿ ಜಿಲ್ಲೆಯ ಗಂಗೊಳ್ಳಿ ಸಮುದ್ರ ತೀರದ ಸಮೀಪ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್ಗೆ ಅಲೆಗಳ ಅಬ್ಬರದಿಂದ ಬಿರುಕು ಉಂಟಾಗಿ, ಬೋಟ್ ಮುಳುಗುವ ಪರಿಸ್ಥಿತಿ ನಿರ್ಮಾಣವಾದ ಘಟನೆ ನಡೆದಿದೆ.
By ಅಶ್ವಥ್ ಆಚಾರ್ಯ | Ashwath Acharya
1 min read
ಉಡುಪಿ ಜಿಲ್ಲೆಯ ಗಂಗೊಳ್ಳಿ ಸಮುದ್ರ ತೀರದ ಸಮೀಪ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್ಗೆ ಅಲೆಗಳ ಅಬ್ಬರದಿಂದ ಬಿರುಕು ಉಂಟಾಗಿ, ಬೋಟ್ ಮುಳುಗುವ ಪರಿಸ್ಥಿತಿ ನಿರ್ಮಾಣವಾದ ಘಟನೆ ನಡೆದಿದೆ. ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯರ ಸಮಯೋಚಿತ ಕಾರ್ಯಾಚರಣೆಯಿಂದ ಬೋಟ್ನಲ್ಲಿದ್ದ 30 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಭಾರೀ ಅಲೆಗಳ ಹೊಡೆತದಿಂದ ಬೋಟ್ಗೆ ಬಿರುಕು ಕಾಣಿಸಿಕೊಂಡಿದೆ. ಇದರಿಂದ ಬೋಟ್ಗೆ ನೀರು ನುಗ್ಗಿ ನಿಧಾನವಾಗಿ ಮುಳುಗಲು ಆರಂಭಿಸಿದೆ.
ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಪ್ರವೃತ್ತವಾಗಿದ್ದು, ಕರಾವಳಿ ಮೀಸಲು ಪಡೆಯ ಇನ್ಸ್ಪೆಕ್ಟರ್ ರಮೇಶ್ ಕೆ. ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಬೋಟ್ನಲ್ಲಿದ್ದ 30 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿ ತೀರ ಪ್ರದೇಶಕ್ಕೆ ಕರೆತರಲಾಯಿತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
Topics
ಸಂಬಂಧಿತ ಸುದ್ದಿಗಳು
udupi
ಉಡುಪಿ : ಸರಣಿ ಮನೆ ಕಳವು ಪ್ರಕರಣ ಬೇಧಿಸಿದ ಪೊಲೀಸರು : ಇಬ್ಬರು ಅರೆಸ್ಟ್ 23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ವಶ
udupi
ಸಾಲಿಗ್ರಾಮದಲ್ಲಿ ಅಪಘಾತಕ್ಕೆ ಕಡಿವಾಣ: 15 ಅಡಿ ಅಗಲದ ಅಂಡರ್ಪಾಸ್ ನಿರ್ಮಾಣಕ್ಕೆ ಒಮ್ಮತ
udupi
ಉಡುಪಿ: ಡೇವಿಡ್ ಡಿ ಸೋಜಾ ಕೊಲೆ ಪ್ರಕರಣದ ಹಿಂದೆ ಭೂಗತ ಜಗತ್ತಿನ ನಂಟು - ಎಸ್ಪಿ ಹರಿರಾಮ್ ಶಂಕರ್
udupi

